Wednesday, August 19, 2026

BDA Apartments

Home Crime ನಕಲಿ ಔಷಧಿ ಮರುಪ್ಯಾಕಿಂಗ್ ಬೃಹತ್ ಜಾಲ ಪತ್ತೆ: 6 ಕೋಟಿ ರೂ.ಗೂ ಹೆಚ್ಚು ಮೌಲ್ಯದ ವಸ್ತುಗಳು...

ನಕಲಿ ಔಷಧಿ ಮರುಪ್ಯಾಕಿಂಗ್ ಬೃಹತ್ ಜಾಲ ಪತ್ತೆ: 6 ಕೋಟಿ ರೂ.ಗೂ ಹೆಚ್ಚು ಮೌಲ್ಯದ ವಸ್ತುಗಳು ವಶಕ್ಕೆ

ಬೆಂಗಳೂರು ದಕ್ಷಿಣ,ಆಗಸ್ಟ್,19,2026 (www.justkannada.in):  ನಕಲಿ ಔಷಧಿ ಮರುಪ್ಯಾಕಿಂಗ್ ಮಾಡಿ ಮಾರಾಟ ಮಾಡುತ್ತಿದ್ದ ಬೃಹತ್ ಜಾಲ ಪತ್ತೆಯಾಗಿದ್ದು  ಅಧಿಕಾರಿಗಳು 6 ಕೋಟಿ ರೂ.ಗೂ ಹೆಚ್ಚು ಮೌಲ್ಯದ ವಸ್ತುಗಳನ್ನ ವಶಕ್ಕೆ ಪಡೆದಿದ್ದಾರೆ.

ಬೆಂಗಳೂರು ದಕ್ಷಿಣ ತಾಲ್ಲೂಕಿನ ದೊಡ್ಡೇರಿ ಬಳಿ ಸಿಕೆ ತಾಂಡ್ಯದಲ್ಲಿ ಆಹಾರ ಸುರಕ್ಷತೆ ಮತ್ತು ಔಷಧಿ ಇಲಾಖೆ  ಕಾರ್ಯಾಚರಣೆ  ನಡೆಸಿದೆ. ತಾವರೆಕೆರೆ ಪೊಲೀಸರ ನೇತೃತ್ವದಲ್ಲಿ 30ಕ್ಕೂ ಹೆಚ್ಚು ಅಧಿಕಾರಿಗಳು ದಾಳಿ ನಡೆಸಿ ನಕಲಿ ಔಷಧಿಗಳನ್ನ ವಶಕ್ಕೆ ಪಡೆದಿದ್ದಾರೆ.

6 ಕೋಟಿ ರೂ.ಗೂ ಹೆಚ್ಚು ಮೌಲ್ಯದ ವಸ್ತುಗಳನ್ನ ವಶಕ್ಕೆ ಪಡೆಯಲಾಗಿದೆ.  600 ರೂ. ಔಷಧಿಗೆ ಮರುಪ್ಯಾಕಿಂಗ್ ಮಾಡಿ 6 ಸಾವಿರ ರೂ. ನ ಲೇಬಲ್  ಅಂಟಿಸಿ ಮಾರಾಟ ಮಾಡುತ್ತಿದ್ದರು ಎನ್ನಲಾಗಿದೆ.

ಬೇರೆ ರಾಜ್ಯಗಳಿದ ಕಡಿಮೆ ಮೌಲ್ಯದ ಔಷಧಿಗಳನ್ನ ಆಮದು ಮಾಡಿಕೊಂಡು ಈ ದಂಧೆ ನಡೆಸುತ್ತಿದ್ದರು . ನಕಲಿ ಔಷಧಿ ತಯಾರಿಸುತ್ತಿದ್ದ ಗ್ಯಾಂಗ್ ಪ್ರಶಾಂತ್ ಎಂಬುವವರ ಫಾರ್ಮ್ ಹೌಸ್ ಲೀಸ್ ಪಡೆದು ಈ ದಂಧೆ ನಡೆಸುತ್ತಿದ್ದರು ಎನ್ನಲಾಗಿದೆ.

Key words: Huge, fake medicine, repackaging network,