ಅಪಘಾತದಲ್ಲಿ ಗಾಯಗೊಂಡ ಮಹಿಳೆಯನ್ನ ಆಸ್ಪತ್ರೆಗೆ ದಾಖಲಿಸಿ ಮಾನವೀಯತೆ ಮೆರೆದ ಶಾಸಕ ಯತೀಂದ್ರ ಸಿದ್ದರಾಮಯ್ಯ.

ಮೈಸೂರು,ಜೂನ್,30,2022(www.justkannada.in): ಅಪಘಾತದಲ್ಲಿ ಗಾಯಗೊಂಡ ಮಹಿಳೆಯನ್ನು ಆಸ್ಪತ್ರೆಗೆ ದಾಖಲಿಸಿ ಶಾಸಕ ಯತೀಂದ್ರ ಸಿದ್ದರಾಮಯ್ಯ ಮಾನವೀಯತೆ ಮೆರೆದಿದ್ದಾರೆ.

ಶಾಸಕ ಯತೀಂದ್ರ ಸಿದ್ಧರಾಮಯ್ಯ ಇಂದು ಕ್ಷೇತ್ರ ಪ್ರವಾಸ ಕೈಗೊಂಡಿದ್ದರು. ಈ ವೇಳೆ ವರುಣ ಕ್ಷೇತ್ರದ ಮರಳೂರು ಗ್ರಾಮದ ಬಳಿ ರಸ್ತೆಯಲ್ಲಿ ಆಯತಪ್ಪಿ ಬೈಕ್ ನಿಂದ ಕೆಳಗೆ ಬಿದ್ದು ಮಹಿಳೆಯೊಬ್ಬರು ಗಾಯಗೊಂಡಿದ್ದರು. ಈ ಸಮಯದಲ್ಲಿ ಶಾಸಕ ಯತೀಂದ್ರ ಸಿದ್ಧರಾಮಯ್ಯ ಕಾರು ನಿಲ್ಲಿಸಿ ಮಹಿಳೆಗೆ ಧೈರ್ಯ ತುಂಬಿ ಆಸ್ಪತ್ರೆಗೆ ಕಳುಹಿಸಿದರು.

ಈ ವೇಳೆ ಗಾಯಳುವನ್ನು ಆಸ್ಪತ್ರೆಗೆ ಸಾಗಿಸಲು ನೆರವಾದ ಶಾಸಕ ಯತಿಂದ್ರ ಸಿದ್ಧರಾಮಯ್ಯ ಅವರ ಕಾರ್ಯಕ್ಕೆ ಸಾರ್ವಜನಿಕರಿಂದ ಶ್ಲಾಘನೆ ವ್ಯಕ್ತವಾಯಿತು.

Key words: Humanity- MLA- Yatindra Siddaramaiah – hospital – injured- woman