ಹುಣಸೂರು ಉಪಚುನಾವಣೆ: ನಾಳೆ ನಾಮಪತ್ರ ಸಲ್ಲಿಸಲಿರುವ ಜೆಡಿಎಸ್ ಅಭ್ಯರ್ಥಿ ಸೋಮಶೇಖರ್ …

ಮೈಸೂರು,ನ,15,2019(www.justkannada.in): ಡಿಸೆಂಬರ್ 5 ರಂದು ರಾಜ್ಯದ 15 ವಿಧಾನಸಭಾ ಕ್ಷೇತ್ರಗಳಿಗೆ ನಡೆಯುವ ಉಪಚುನಾವಣೆಗೆ ಮೂರು ಪಕ್ಷಗಳು ಭರ್ಜರಿ ತಯಾರಿ ನಡೆಸುತ್ತಿದ್ದು, ಈ ನಡುವೆ ಹುಣಸೂರು ಕ್ಷೇತ್ರದ ಜೆಡಿಎಸ್ ಅಭ್ಯರ್ಥಿಯಾಗಿ ನಾಳೆ ಸೋಮಶೇಖರ್ ನಾಮಪತ್ರ ಸಲ್ಲಿಸಲಿದ್ದಾರೆ.

ನಾಳೆ  11.30ಕ್ಕೆ ಅಪಾರ ಅಭಿನಾನಿಗಳೊಂದಿಗೆ  ಎಸಿ ಕಚೇರಿಗೆ ಬಂದು ಜೆಡಿಎಸ್ ಅಭ್ಯರ್ಥಿ ಸೋಮಶೇಖರ್ ನಾಮಪತ್ರ ಸಲ್ಲಿಸಲಿದ್ದಾರೆ. ನಾಮಪತ್ರ ಸಲ್ಲಿಕೆಗೆ ಮಾಜಿ ಸಿಎಂ ಕುಮಾರಸ್ವಾಮಿ ಆಗಮಿಸುವ ಹಿನ್ನೆಲೆ ಹುಣಸೂರು ಕ್ಷೇತ್ರದಲ್ಲಿ ಜೆಡಿಎಸ್ ಶಕ್ತಿ ಪ್ರದರ್ಶನಕ್ಕೆ ಮುಂದಾಗಿದೆ.

ಕಾಂಗ್ರೆಸ್ , ಬಿಜೆಪಿಗೆ ಸೆಡ್ಡುಹೊಡೆಯಲು ಜೆಡಿಎಸ್ ಚಿಂತನೆ ನಡೆಸಿದ್ದು, ನಾಳೆ ಜೆಡಿಎಸ್ ಅಭ್ಯರ್ಥಿ ಸೋಮಶೇಖರ್, ಡಿ ದೇವರಾಜ ಅರಸು ಪುತ್ಥಳಿಗೆ ಮಾಲಾರ್ಪಣೆ ಮಾಡಿ ಬಳಿಕ ಮೆರವಣಿಗೆಯ ಮೂಲಕ  ಎಸಿ ಕಚೇರಿ ತಲುಪಿ ನಾಮಪತ್ರ ಸಲ್ಲಿಸಲಿದ್ದಾರೆ.

Key words: hunur –by-election- JDS candidate  -SomasHekhar- nomination- tomorrow