ಪತ್ನಿಯನ್ನ ಬರ್ಬರವಾಗಿ ಹತ್ಯೆಗೈದು ಬಳಿಕ ತಾನೂ ಆತ್ಮಹತ್ಯೆಗೆ ಶರಣಾದ ಪತಿ..

ಬೆಂಗಳೂರು,ಆಗಸ್ಟ್,2,2023(www.justkannada.in): ಮಚ್ಚಿನಿಂದ ಪತ್ನಿಯನ್ನ ಬರ್ಬರವಾಗಿ ಹತ್ಯೆಗೈದು ಬಳಿಕ ಪತಿ ತಾನೂ ವಿಷ ಸೇವಿಸಿ ಆತ್ಮಹತ್ಯೆಗೆ ಶರಣಾಗಿರುವ ಘಟನೆ ಬೆಂಗಳೂರಿನಲ್ಲಿ ನಡೆದಿದೆ.

ಬೆಂಗಳೂರಿನ ಆನೇಕಲ್ ತಾಲ್ಲೂಕಿನ ಬಿಕ್ಕನಹಳ್ಳಿ ಜನತಾ ಕಾಲೋನಿಯಲ್ಲಿ ಈ ಘಟನೆ ನಡೆದಿದೆ. ಲಕ್ಷ್ಮಣಮ್ಮ(47) ಪತಿ ವೆಂಕಟಸ್ವಾಮಿ(52)ಯಿಂದಲೇ ಹತ್ಯೆಯಾದವರು.  ಇಬ್ಬರ ನಡುವೆ ನಿನ್ನೆ ರಾತ್ರಿ ಕ್ಷುಲ್ಲಕ ಕಾರಣಕ್ಕೆ ಗಲಾಟೆ ನಡೆದಿದೆ.

ನಂತರ ಪತಿ ವೆಂಕಟಸ್ವಾಮಿ ಪತ್ನಿ ಲಕ್ಷ್ಮಮ್ಮ ಮೇಲೆ ಮಚ್ಚಿನಿಂದ ಹಲ್ಲೆಗೈದು ಕೊಲೆ ಮಾಡಿ ಬಳಿಕ ತಾನೂ ವಿಷ ಸೇವಿಸಿ ಆತ್ಮಹತ್ಯೆಗೆ ಶರಣಾಗಿದ್ದು, ಸ್ಥಳಕ್ಕೆ ಸರ್ಜಾಪುರ ಠಾಣಾ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

Key words:  husband -committed –suicide- after -killing -his wife.