ಅನೈತಿಕ ಸಂಬಂಧ ಪ್ರಶ್ನಿಸಿದಕ್ಕೆ ಪತ್ನಿಯನ್ನೇ ಕೊಲೆಗೈದ ಪತಿ.

ಮಂಡ್ಯ,ಜುಲೈ,7,2022(www.justkannada.in): ಅನೈತಿಕ ಸಂಬಂಧ ಪ್ರಶ್ನಿಸಿದಕ್ಕೆ ಪತ್ನಿಯನ್ನೇ ಪತಿ ಹತ್ಯೆಗೈದಿರುವ ಘಟನೆ ಮಂಡ್ಯ ಜಿಲ್ಲೆ ಶ್ರೀರಂಗಪಟ್ಟಣ ತಾಲೂಕಿನಲ್ಲಿ ನಡೆದಿದೆ.

ಶ್ರೀರಂಗಪಟ್ಟಣ ತಾಲ್ಲೂಕಿನ ಗೆಂಡೆಹೊಸಹಳ್ಳಿ ಗ್ರಾಮದಲ್ಲಿ ಈ ಘಟನೆ ನಡೆದಿದೆ.ಯೋಗಿತಾ (27) ಗಂಡನಿಂದಲೇ ಕೊಲೆಯಾದ ಮಹಿಳೆ. ರವಿ ಮಕ್ಕಳ ಮುಂದೆಯೇ ಪತ್ನಿ ಕೊಲೆ ಮಾಡಿದ ಪಾಪ ಪತಿ. ರವಿ ಬೇರೆ ಮಹಿಳೆಯೊಂದಿಗೆ ಅನೈತಿಕ ಸಂಬಂಧವಿಟ್ಟುಕೊಂಡಿದ್ದನು. ಇದು ಪತ್ನಿಗೂ ತಿಳಿದಿತ್ತು. ಇಬ್ಬರ ನಡುವೆ ಆಗಾಗ ಜಗಳ ನಡೆಯುತ್ತಿತ್ತು. ಮನೆ ಬಿಟ್ಟು ಹೋಗುವಂತೆ ಪತ್ನಿಗೆ ಪದೇಪದೆ ರವಿ ಹಿಂಸೆ ನೀಡುತ್ತಿದ್ದ  ಎನ್ನಲಾಗಿದೆ.

ಪತಿ-ಪತ್ನಿ ನಡುವಿನ ಜಗಳ ಸಂಬಂಧ ಸಾಕಷ್ಟು ಬಾರಿ ಗ್ರಾಮದ ಮುಖಂಡರು ನ್ಯಾಯ ಪಂಚಾಯಿತಿಯನ್ನು ನಡೆಸಿದ್ದರು. ಆದರೂ ಜಗಳ ಮಾತ್ರ ನಿಂತಿರಲಿಲ್ಲ. ನಿನ್ನೆ ರಾತ್ರಿಯೂ ಗಂಡ -ಹೆಂಡತಿ ನಡುವೆ ಮತ್ತೆ ಜಗಳ ಆರಂಭವಾಗಿದ್ದು,  ಇಬ್ಬರ ನಡುವಿನ ವಾಗ್ವಾದ ಹೆಚ್ಚಾಗಿ ಪತ್ನಿ ಯೋಗಿತಾಗೆ ಮನಬಂದಂತೆ ಥಳಿಸಿದ ರವಿ, ಬಳಿಕ ಪತ್ನಿಯನ್ನು  ಕೊಲೆಗೈದಿದ್ದಾನೆ.

ಈ ವೇಳೆ ನೆರೆಮನೆಯವರು ಸ್ಥಳಕ್ಕೆ ಧಾವಿಸಿದ್ದು  ಇಷ್ಟೊತ್ತಿಗಾಗಲೇ ರವಿ ಪತ್ನಿಯನ್ನು ಕೊಲೆಗೈದಿದ್ದ. ಸದ್ಯ ಮನೆಯ ಮುಂದೆ ಯೋಗಿತಾ ಪಾಲಕರ ಆಕ್ರಂದನ ಮುಗಿಲು ಮುಟ್ಟಿದ್ದು,  ಪರಾರಿಯಾಗಿರುವ ರವಿಯನ್ನು ಸ್ಥಳಕ್ಕೆ ಕರೆಸುವಂತೆ ಯೋಗಿತಾ ಪಾಲಕರು ಪಟ್ಟು ಹಿಡಿದಿದ್ದಾರೆ. ಈ ಸಂಬಂಧ ಅರಕೆರೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Key words:  husband- killed -his wife -mandya