ಹೆಚ್.ವಿಶ್ವನಾಥ್ ಹೇಳಿಕೆ ವಿಚಾರ: ಮಾಜಿ ಸಿಎಂ ಸಿದ್ದರಾಮಯ್ಯಗೆ ಕರೆ ಮಾಡಿ ಸಮಾಧಾನ ಹೇಳಿದ್ರಾ ಸಿಎಂ ಹೆಚ್.ಡಿ ಕುಮಾರಸ್ವಾಮಿ…

ಹುಬ್ಬಳ್ಳಿ,ಮೇ,14,2019(www.justkannada.in): ಸಿಎಂ ಹೆಚ್.ಡಿ ಕುಮಾರಸ್ವಾಮಿ ತಂಗಿದ್ದ ಹೋಟೆಲ್ ಗೆ ಮಾಜಿ ಸಿಎಂ ಸಿದ್ದರಾಮಯ್ಯ ಭೇಟಿ ನೀಡಿ ಚರ್ಚೆ ನಡೆಸುತ್ತಿದ್ದಾರೆ ಎಂಬ ಸುದ್ದಿ ಹಬ್ಬಿತ್ತು. ಆದರೆ ಹೋಟೆಲ್ ನಲ್ಲಿ ಉಭಯ ನಾಯಕರ ನಡುವೆ ಯಾವುದೇ ಚರ್ಚೆ ನಡೆದಿಲ್ಲ  ಮಾತುಕತೆಯೂ ನಡೆದಿಲ್ಲ.

ಹೌದು, ಇಂದು ಹುಬ್ಬಳ್ಳಿಯಲ್ಲಿ ಖಾಸಗಿ ಹೋಟೆಲ್ ನಲ್ಲಿ ತಂಗಿದ್ದ ಸಿಎಂ ಹೆಚ್.ಡಿ ಕುಮಾರಸ್ವಾಮಿ ಹೋಟೆಲ್ ಗೆ ಸಿದ್ದರಾಮಯ್ಯ ಭೇಟಿ ನೀಡಿದ್ದರು. ಒಂದೇ ಹೋಟೆಲ್ ನಲ್ಲಿ ಮೈತ್ರಿ ನಾಯಕರಿದ್ದರೂ ಇವರು ಪರಸ್ಪರ ಮಾತುಕತೆ ನಡೆಸಿಲ್ಲ. ಆದರೆ ಈ ವೇಳೆ ಸಿಎಂ ಹೆಚ್.ಡಿ ಕುಮಾರಸ್ವಾಮಿ ಸಿದ್ದರಾಮಯ್ಯ ಅವರಿಗೆ ಕರೆ ಮಾಡಿ ಹೆಚ್. ವಿಶ್ವನಾಥ್ ಹೇಳಿಕೆ ಕುರಿತು ಸಮಾಧಾನ ಹೇಳಿದ್ದಾರೆ ಎನ್ನಲಾಗಿದೆ.

ದೂರವಾಣಿ ಕರೆ ವೇಳೆ ಸಿಎಂ ಹೆಚ್.ಡಿ ಕುಮಾರಸ್ವಾಮಿ ಬಳಿ ಹೆಚ್.ವಿಶ್ವನಾಥ್ ಅವರ ಹೇಳಿಕೆ ಕುರಿತು  ಸಿದ್ದರಾಮಯ್ಯ ತಮ್ಮ ತೀವ್ರ ಅಸಮಾಧಾನ ಹೊರಹಾಕಿದ್ದಾರೆ. ಈ ಸಂದರ್ಭದಲ್ಲಿ ಸಿಎಂ ಹೆಚ್.ಡಿ ಕುಮಾರಸ್ವಾಮಿ ಸಹ ಬೇಸರ ವ್ಯಕ್ತಪಡಿಸಿದ್ದು, ಹೆಚ್.ವಿಶ್ವನಾಥ್ ಆ ರೀತಿ ಹೇಳಬಾರದಿತ್ತು. ವಿಶ್ವನಾಥ್ ಹೇಳಿಕೆಗೆ ಬೇಸರ ಮಾಡಿಕೊಳ್ಳಬೇಡಿ ಎಂದು ಸಮಾಧಾನ ಹೇಳಿದ್ದಾರೆ ಎನ್ನಲಾಗುತ್ತಿದೆ.

Key words: Hvishwanath-statement- CM HD Kumaraswamy calls – Former CM- Siddaramaiah