ನಾನೂ ಕೂಡ ಸಚಿವ ಸ್ಥಾನದ ಆಕಾಂಕ್ಷಿ- ಶಾಸಕ ಶಿವಲಿಂಗೇಗೌಡ.  

ಹಾಸನ,ಜನವರಿ,1,2024(www.justkannada.in):  ಕಾಂಗ್ರೆಸ್  ಸೇರುವಾಗಲೇ ನನ್ನನ್ನ 0ಮಂತ್ರಿ ಮಾಡುತ್ತೇವೆ ಎಂದು ಮಾತು ಕೊಟ್ಟಿದ್ದಾರೆ. ನಾನೂ ಕೂಡ ಸಚಿವ ಸ್ಥಾನದ ಆಕಾಂಕ್ಷಿ ಎಂದು ಅರಸೀಕೆರೆ ಶಾಸಕ ಶಿವಲಿಂಗೇಗೌಡ ಹೇಳಿದ್ದಾರೆ.

ಇಂದು ಮಾಧ್ಯಮಗಳ ಜೊತೆ ಮಾತನಾಡಿದ ಶಾಸಕ ಶಿವಲಿಂಗೇಗೌಡ, ನನ್ನನ್ನು ಮಂತ್ರಿ ಮಾಡುತ್ತೇವೆ ಎಂದು ಡಿಕೆ ಶಿವಕುಮಾರ್, ಸಿದ್ದರಾಮಯ್ಯ ಮಾತು ಕೊಟ್ಟಿದ್ದಾರೆ.  2 ವರ್ಷದ ನಂತರ ಸಚಿವ ಸ್ಥಾನ ನೀಡುತ್ತೇನೆ ಎಂದಿದ್ದಾರೆ. ಅಲ್ಲಿವರೆಗೆ ನಿಗಮ ಮಂಡಳಿಯ ಭರವಸೆ ನೀಡಿದ್ದಾರೆ. ನಾನು ಸಿಎಂ ಮತ್ತು ಡಿಸಿಎಂ ಅಣತಿಯಂತೆ ನಡೆಯುತ್ತೇನೆ ಎಂದರು.

ಲೋಕಸಭೆ ಚುನಾವಣೆ ನಂತರ ಕಾಂಗ್ರೆಸ್ ಪತನ ಎಂಬ ಬಿಜೆಪಿ ನಾಯಕರ ಹೇಳಿಕೆಗೆ ತಿರುಗೇಟು ನೀಡಿದ ಶಾಸಕ ಶಿವಲಿಂಗೇಗೌಢ,    ರಾಜ್ಯ ಬಿಜೆಪಿ ನಾಯಕರು ಭ್ರಮೆಯಲ್ಲಿದ್ದಾರೆ.  ಬಿಜೆಪಿಗರು ಹಿಂದೂಗಳನ್ನ ಗುತ್ತಿಗೆ ತೆಗೆದುಕೊಂಡಿದ್ದಾರೆ.  ನಾವೂ  ಹಿಂದೂಗಳೇ. ಹಿಂದೂಗಳ ಪರ ಹೋರಾಟ ಮಾಡುತ್ತೇವೆ ಎಲ್ಲರನ್ನೂ ಸಮಾನವಾಗಿ ನೋಡುತ್ತೇವೆ ಎಂದು ಹೇಳಿದರು.

Key words: I am -also – ministerial aspirant – MLA- Sivalinge Gowda