ನಾನು ಮತ್ತೆ ಸಿಎಂ ಆಗುವ ಕನಸು ಕಾಣುತ್ತಿಲ್ಲ ಅಂದ್ರು ಮಾಜಿ ಸಿಎಂ ಸಿದ್ಧರಾಮಯ್ಯ….

ಬಾಗಲಕೋಟೆ.ಅ,30,2019(www.justkannada.in):  ನಾನು ಮತ್ತೆ ಸಿಎಂ ಆಗುವ ಕನಸು ಕಾಣುತ್ತಿಲ್ಲ ಎಂದು ಮಾಜಿ ಸಿಎಂ ಸಿದ್ಧರಾಮಯ್ಯ ನುಡಿದಿದ್ದಾರೆ.

ಬಾಗಲಕೋಟೆ ಜಿಲ್ಲೆ ಜಮಖಂಡಿಯಲ್ಲಿ ಇಂದು ಮಾತನಾಡಿದ ಮಾಜಿ ಸಿಎಂ ಸಿದ್ಧರಾಮಯ್ಯ, ನಾನು ಐದು ವರ್ಷ ಪೂರ್ಣಾವಧಿ ಸಿಎಂ ಆಗಿದ್ದೆ.  ನಾವು ರಾಜ್ಯ ಬಿಜೆಪಿ ಸರ್ಕಾರ ಬೀಳಿಸುವ ಪ್ರಯತ್ನ ಮಾಡುವುದಿಲ್ಲ. ಉಪ ಚುನಾವಣೆಯಲ್ಲಿ ಕಾಂಗ್ರೆಸ್ 15 ಕ್ಷೇತ್ರಗಳಲ್ಲಿ ಗೆಲುವು ಸಾಧಿಸಲಿದೆ. ಈ ವೇಳೆ ಬಿಜೆಪಿ ಸರ್ಕಾರ ತಾನಾಗಿಯೇ ಪತನವಾಗುತ್ತದೆ. ಬಿ.ಎಸ್ ಯಡಿಯೂರಪ್ಪ ಬಹುಮತದಿಂದ ಸಿಎಂ ಆಗಿಲ್ಲ. ನಮ್ಮ ಶಾಸಕರನ್ನ ಸೆಳೆದುಕೊಂಡು ಸಿಎಂ ಆಗಿದ್ದಾರೆ ಎಂದು ಲೇವಡಿ ಮಾಡಿದರು.

ನನ್ನನ್ನ ಉಡಾಫೆ ಮನುಷ್ಯ ಉಡಾಫೆಯಾಗಿ ಮಾತನಾಡುತ್ತಾರೆ ಎಂದಿದ್ದಾರೆ. ನಾನು ಸಿಎಂ ಆಗಿದ್ದಾಗಅನ್ನಭಾಗ್ಯ, ಕ್ಷೀರಭಾಗ್ಯ, ಹಾಲು ಉತ್ಪಾದಕರಿಗೆ ಸಬ್ಸಿಡಿ ಸೇರಿದಂತೆ ಹಲವು ಯೋಜನೆ ಜಾರಿಗೆ ತಂದಿದ್ದೆ. ನಾನು ಉಡಾಫೆ ಮನುಷ್ಯನಾ ಎಂದು ಮಾಜಿ ಸಿಎಂ ಸಿದ್ಧರಾಮಯ್ಯ ಪ್ರಶ್ನಿಸಿದರು.

Key words: I am -not dreaming  -CM –again-siddaramaiha