ನಾನು ಎಐಸಿಸಿ ಹಂಗಾಮಿ ಅಧ್ಯಕ್ಷೆಯಲ್ಲ, ಕಾಂಗ್ರೆಸ್  ಪಕ್ಷದ ಪೂರ್ಣಾವಧಿ ಅಧ್ಯಕ್ಷೆ – ಸೋನಿಯಾ ಗಾಂಧಿ ಹೇಳಿಕೆ.

ನವದೆಹಲಿ,ಅಕ್ಟೋಬರ್,16,2021(www.justkannada.in):  ನಾನು ಎಐಸಿಸಿ ಹಂಗಾಮಿ ಅಧ್ಯಕ್ಷೆಯಲ್ಲ, ಕಾಂಗ್ರೆಸ್ ಪಕ್ಷದ ಪೂರ್ಣಾವಧಿ ಅಧ್ಯಕ್ಷೆ ಎಂದು ಕಾಂಗ್ರೆಸ್ ನಾಯಕಿ ಸೋನಿಯಾ ಗಾಂಧಿ ಸ್ಪಷ್ಟಪಡಿಸಿದ್ದಾರೆ.

ಕಾಂಗ್ರೆಸ್ ಪಕ್ಷದ ಕಾರ್ಯಕಾರಿಣಿ ಸಮಿತಿ ಸಭೆಯಲ್ಲಿ ಮಾತನಾಡಿದ ಸೋನಿಯಾ ಗಾಂಧಿ, ಕಾಂಗ್ರೆಸ್‌ ಪಕ್ಷಕ್ಕೆ ನಾನೇ ಪೂರ್ಣಾವಧಿಯ ಸಕ್ರಿಯ ಅಧ್ಯಕ್ಷೆ. ಸಂಘಟನೆ ಕಾಂಗ್ರೆಸ್‌ ನ ಪುನರುಜ್ಜೀವನವನ್ನು ಬಯಸುತ್ತದೆ. ಇದಕ್ಕೆ, ಒಗ್ಗಟ್ಟು, ಪಕ್ಷದ ಹಿತವೇ ಅಂತಿಮ ಎಂಬ ಮನೋಭವಾ ಅಗತ್ಯ. ಎಲ್ಲಕ್ಕಿಂತ ಸ್ವಯಂ ನಿಯಂತ್ರಣ ಮತ್ತು ಶಿಸ್ತಿನ ಅಗತ್ಯವಿದೆ’ ಎಂದು ಅವರು ಹೇಳಿದರು.

ದೇಶದ ಆರ್ಥಿಕ ಪರಿಸ್ಥಿತಿಯ  ಬಗ್ಗೆ ಆತಂಕ ವ್ಯಕ್ತಪಡಿಸಿದ  ಸೋನಿಯಾ ಗಾಂಧಿ ಅವರು, ನಿರಂತರವಾಗಿ ಭಾರತದ ಆರ್ಥಿಕತೆ ಕುಸಿಯುತ್ತಿದೆ  ಆರ್ಥಿಕ ಹಿಂಜರಿತ ಮಚ್ಚಿಡಲು ಸರ್ಕಾರದ ಆಸ್ತಿ ಮಾರಾಟ ಮಾಡುತ್ತಿದ್ದಾರೆ. ರಾಷ್ಟ್ರದ ಆಸ್ತಿ ಮಾರಾಟವೇ, ದೇಶದ ಆರ್ಥ ವ್ಯವಸ್ಥೆಯನ್ನು ಸರಿ ದಾರಿಗೆ ತರಲು ಇರುವ ಮಾರ್ಗವೆಂದು ಸರ್ಕಾರ ಭಾವಿಸಿಕೊಂಡಂತೆ ಕಾಣುತ್ತಿದೆ ಎಂದು ಕಿಡಿಕಾರಿದರು.

ಲಖಿಂಪುರ ಖೇರಿ ಹಿಂಸಾಚಾರ ಕುರಿತು ಮಾತನಾಡಿದ  ಸೋನಿಯಾ ಗಾಂಧಿ, ‘ಲಖಿಂಪುರ್-ಖೇರಿಯಲ್ಲಿ ನಡೆದ ಆಘಾತಕಾರಿ ಘಟನೆಗಳು ಬಿಜೆಪಿಯ ಮನಸ್ಥಿತಿಯನ್ನು ಬಹಿರಂಗಪಡಿಸಿದೆ. ರೈತರ ಚಳವಳಿಯನ್ನು ಅದು ಹೇಗೆ ಗ್ರಹಿಸುತ್ತದೆ ಎಂಬುದನ್ನು ಸಾಬೀತುಪಡಿಸಿದೆ ಎಂದು ಟೀಕಿಸಿದರು.

Key words: I am -not -provisional president – AICC – full-time- chairperson – Congress party-Sonia Gandhi.