ನಾನು ಈ ಬಾರಿ ಚಾಮರಾಜನಗರ ಲೋಕಸಭಾ ಕ್ಷೇತ್ರದ ಟಿಕೆಟ್ ಆಕಾಂಕ್ಷಿ- ಪುಷ್ಪಾ ಅಮರನಾಥ್

ಮೈಸೂರು,ಅಕ್ಟೋಬರ್,31,2023(www.justkannada.in):  ನಾನು ಈ ಬಾರಿ ಚಾಮರಾಜನಗರ ಲೋಕಸಭಾ ಕ್ಷೇತ್ರದ  ಕಾಂಗ್ರೆಸ್ ಟಿಕೆಟ್ ಆಕಾಂಕ್ಷಿಯಾಗಿದ್ದೇನೆ ಎಂದು ಕೆಪಿಸಿಸಿ ಮಹಿಳಾ ಘಟಕದ ಅಧ್ಯಕ್ಷೆ ಪುಷ್ಪಾ ಅಮರನಾಥ್ ಹೇಳಿದರು.

ಚಾಮರಾಜನಗರ ಲೋಕಸಭಾ ಕ್ಷೇತ್ರದಲ್ಲಿ ಟಿಕೆಟ್ ಆಕಾಂಕ್ಷಿ ಕೆಪಿಸಿಸಿ ಅಧ್ಯಕ್ಷೆ ಪುಷ್ಪಾ ಅಮರನಾಥ್ ಅವರು  ಕಾಂಗ್ರೆಸ್ ಕಾರ್ಯಕರ್ತರು ಮತ್ತು ಬೆಂಬಲಿಗರಿಗೆ ತಿ.ನರಸೀಪುರ ಪಟ್ಟಣದ ಚೌಡೇಶ್ವರಿ ದೇವಸ್ಥಾನದಲ್ಲಿ ಭರ್ಜರಿ ಬಾಡೂಟ ಆಯೋಜನೆ ಮಾಡಿದ್ದರು.

ಬಳಿಕ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಡಾ. ಪುಷ್ಪಾ ಅಮರನಾಥ್, ನಾನು ಈ ಭಾರಿ ಚಾಮರಾಜನಗರ ಲೋಕಸಭಾ ಕ್ಷೇತ್ರದ ಟಿಕೆಟ್ ಆಕಾಂಕ್ಷಿಯಾಗಿದ್ದೇನೆ. ಈ ಹಿಂದೆ ಎರಡು ಮೂರು ಭಾರಿ ವಿಧಾನಸಭೆಗೆ ಟಿಕೆಟ್ ಕೇಳಿದ್ದೆ. ಮಹಿಳಾ ಕೋಟಾದಲ್ಲಿ ನಮಗೂ ಅವಕಾಶ ನೀಡಬೇಕು. ಮಲ್ಲಿಕಾರ್ಜುನ ಖರ್ಗೆ, ಸಿದ್ದರಾಮಯ್ಯ, ಡಿಕೆ ಶಿವಕುಮಾರ್ ಯಾರಿಗೆ ಟಿಕೆಟ್ ಕೊಟ್ಟರೂ ಪಕ್ಷದ ಗೆಲುವಿಗೆ ದುಡಿಯುತ್ತೇವೆ. ಆದರೆ ಈ ಬಾರಿ ಚಾಮರಾಜನಗರ ಲೋಕಸಭಾ ಕ್ಷೇತ್ರದ ಟಿಕೆಟ್ ನೀಡುವ ಮೂಲಕ ನನಗೂ ಒಂದು ಅವಕಾಶ ಮಾಡಿಕೊಡಬೇಕು ಎಂದು ಆಗ್ರಹಿಸಿದರು.

Key words: I am – ticket -aspirant – Chamarajanagar- LokSabha -constituency – Pushpa Amarnath