ಸಿಎಂ ಬದಲಾವಣೆ ವಿಚಾರದ ಬಗ್ಗೆ ನಾನು ಮಾತನಾಡಲ್ಲ – ಗೃಹ ಸಚಿವ ಡಾ.ಜಿ.ಪರಮೇಶ್ವರ್.

ಬೆಂಗಳೂರು,ನವೆಂಬರ್,4,2023(www.justkannada.in): ಐದು ವರ್ಷ ನಾನೇ ಸಿಎಂ ಎಂದು ಸಿಎಂ ಸಿದ್ಧರಾಮಯ್ಯ ಹೇಳಿಕೆ ನೀಡಿದ ಬೆನ್ನಲ್ಲೆ  ಸಿಎಂ ಬದಲಾವಣೆ ವಿಚಾರ ಸಾಕಷ್ಟು ಚರ್ಚೆಯಾಗುತ್ತಿದ್ದು, ಹಲವು ಸಚಿವರು ತಮ್ಮ ಅಭಿಪ್ರಾಯವನ್ನ ವ್ಯಕ್ತಪಡಿಸಿದ್ದಾರೆ. ಈ ವಿಚಾರದ ಬಗ್ಗೆ ಪ್ರತಿಕ್ರಿಯಿಸಿರುವ ಗೃಹ ಸಚಿವ ಡಾ.ಜಿ.ಪರಮೇಶ್ವರ್, ಸಿಎಂ ಬದಲಾವಣೆ  ಏನು ಕೇಳಬೇಡಿ ಈ ಬಗ್ಗೆ ನಾನು ಮಾತನಾಡಲ್ಲ ಎಂದಿದ್ದಾರೆ.

ಇಂದು ಮಾಧ್ಯಮಗಳ ಜೊತೆ ಮಾತನಾಡಿದ ಸಚಿವ ಡಾ.ಜಿ.ಪರಮೇಶ್ವರ್, ನನ್ನ ಇಲಾಖೆ ಬಗ್ಗೆ ಕೇಳಿ ಹೇಳುತ್ತೇನೆ. ಸರ್ಕಾರ ಪೊಲೀಸ್ ಇಲಾಖೆ ಬಗ್ಗೆ ಮಾತನಾಡುತ್ತೇನೆ. ಆದರೆ ಸಿಎಂ ಬದಲಾವಣೆ ವಿಚಾರ ಮಾತನಾಡಲ್ಲ ದಯವಿಟ್ಟು ಆ ವಿಚಾರದ ಬಗ್ಗೆ ಏನು ಕೇಳಬೇಡಿ ಎಂದರು.

ಕಾಂಗ್ರೆಸ್ ನಲ್ಲಿ ಯಾವುದೇ ಗೊಂದಲ ಇಲ್ಲ ಸುಮ್ಮನೇ ಹೇಳಿಕೆ ಕೊಟ್ಟರೇ ಅದು ಗೊಂದಲ ಅಲ್ಲ. ದಲಿತ ಸಿಎಂ ವಿಚಾರ ಗೊತ್ತಿಲ್ಲ ಎಂದು ಪರಮೇಶ್ವರ್ ತಿಳಿಸಿದರು.

Key words: I did- not- talk -about -CM change -issue – Home Minister -Dr. G. Parameshwar,