ನನ್ನ ವಿರುದ್ದ ನೂರು ಎಫ್ ಐಆರ್ ಹಾಕಿದ್ರೂ ಹೆದರಲ್ಲ-ನೋಟಿಸ್ ಕುರಿತು ಕೆ.ಎಸ್ ಈಶ್ವರಪ್ಪ ಗರಂ.

ಶಿವಮೊಗ್ಗ, ಫೆಬ್ರವರಿ 10,2024(www.justkannada.in): ದೇಶದ್ರೋಹಿ ಹೇಳಿಕೆ ನೀಡಿದವರಿಗೆ ಗುಂಡಿಕ್ಕುವ ಕಾನೂನು ತನ್ನಿ ಎಂಬ ಹೇಳಿಕೆ ವಿಚಾರಕ್ಕೆ ಸಂಬಂಧಿಸಿದಂತೆ ಮಾಜಿ ಸಚಿವ ಕೆ.ಎಸ್ ಈಶ್ವರಪ್ಪ ವಿರುದ್ದ  ದಾವಣಗೆರೆ ಪೊಲೀಸ್ ಠಾಣೆಯಲ್ಲಿ ಎಫ್ ಐಆರ್ ದಾಖಲಾಗಿದ್ದು ಪೊಲೀಸರು ನೋಟಿಸ್ ನೀಡಿದ್ದಾರೆ.

ಈ ಹಿನ್ನೆಲೆಯಲ್ಲಿ ನೋಟಿಸ್ ಕುರಿತು ಮಾತನಾಡಿ ಆಕ್ರೋಶ ವ್ಯಕ್ತಪಡಿಸಿರುವ ಮಾಜಿ ಸಚಿವ ಕೆ.ಎಸ್ ಈಶ್ವರಪ್ಪ, ನನ್ನ ವಿರುದ್ಧ ಇಂತಹ ನೂರು ಎಫ್​ ಐಆರ್​ ಹಾಕಿದರು ನಾನು ಹೆದರಲ್ಲ. ದೇಶದ್ರೋಹಿ ಹೇಳಿಕೆ ನೀಡಿದವರ ವಿರುದ್ಧ ಕ್ರಮಕ್ಕೆ ಆಗ್ರಹಿಸುವೆ. ದೇಶದ್ರೋಹಿ ಹೇಳಿಕೆ ಕೊಡುವವರ ಮೇಲೆ ಕೇಸ್ ಹಾಕಿಲ್ಲ. ಆದರೆ ನನ್ನ ಮೇಲೆ ಕೇಸ್ ಹಾಕಿದ್ದಾರೆ. ಸರ್ಕಾರ ಸಂಸದ ಡಿ.ಕೆ.ಸುರೇಶ್ ಅವರ ಹೇಳಿಕೆಯನ್ನು ಸಮರ್ಥಿಸಿಕೊಂಡಿದೆ. ರಾಷ್ಟ್ರದ್ರೋಹಿಗಳನ್ನ ಗುಂಡಿಕ್ಕಿ ಕೊಲ್ಲುವ ಕಾನೂನು ತರಬೇಕೆಂದು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಮನವಿ ಮಾಡಿದ್ದೇನೆ ಎಂದು ತಿಳಿಸಿದರು.

ನಾನು ಎಲ್ಲೂ ಸಂಸದ ಡಿಕೆ ಸುರೇಶ್ ಅವರಿ​ಗೆ ಗುಂಡಿಕ್ಕಿ ಕೊಲ್ಲಿ ಅಂತ ಹೇಳಿಲ್ಲ. ಸಂಸದ ಡಿ.ಕೆ.ಸುರೇಶ್‌ ಅವರಿಗೆ ಮೊದಲು ನೋಟಿಸ್ ಕೊಡಲಿ. ನನ್ನ ಹೇಳಿಕೆ ಇಟ್ಟುಕೊಂಡು ಕಾಂಗ್ರೆಸ್​​ ಗೊಂದಲ ಸೃಷ್ಟಿಸುತ್ತಿದೆ. ನನಗೆ ನೋಟಿಸ್ ಬಂದಿದೆ, ನಾನು ಉತ್ತರ ಕೊಡುತ್ತೇನೆ. ಪ್ರಕರಣದಲ್ಲಿ ನನಗೆ ಕ್ಲೀನ್ ​ಚಿಟ್ ಸಿಗುವ ವಿಶ್ವಾಸ ಇದೆ  ಎಂದು ಕೆ.ಎಸ್ ಈಶ್ವರಪ್ಪ ತಿಳಿಸಿದರು.

Key words: I don’t -care -100 FIRs – filed -against me – KS Eshwarappa