ನನಗೂ ಡಿಸಿಎಂ ಆಗುವ ಆಸೆ ಎಂದ ಸಚಿವ ಶ್ರೀರಾಮುಲು

ದಾವಣಗೆರೆ, ಫೆಬ್ರವರಿ 08, 2020 (www.justkannada.in): ನನಗೂ ಡಿಸಿಎಂ ಆಗುವ ಆಸೆ ಇದೆ. ನಾನೂ ಕೂಡ ಡಿಸಿಎಂ ಸ್ಥಾನದ ಆಕಾಂಕ್ಷಿ ಎಂದು ಆರೋಗ್ಯ ಸಚಿವ ಶ್ರೀರಾಮುಲು ಹೇಳಿದ್ದಾರೆ.

ದಾವಣಗೆರೆಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮುಖ್ಯಮಂತ್ರಿಗಳು ಒತ್ತಡದಲ್ಲಿ ಕೆಲಸ ಮಾಡುತ್ತಿದ್ದಾರೆ. ಹೀಗಾಗಿ ಅವರಿಗೆ ಮುಜುಗರ ತರುವ ಕೆಲಸ ಮಾಡಲ್ಲ ಎಂದರು.

ಮುಂದಿನ ದಿನಗಳಲ್ಲಿ ಡಿಸಿಎಂ ಆಗುವ ಅವಕಾಶ ಬರುತ್ತದೆ. ಸಿಎಂ ಬಿಎಸ್ ವೈ ಕೊಟ್ಟ ಮಾತನ್ನು ಯಾವತ್ತೂ ತಪ್ಪಲ್ಲ. ನಮ್ಮ ವಾಲ್ಮೀಕಿ ಸಮುದಾಯಕ್ಕೆ ನ್ಯಾಯ ಒದಗಿಸುತ್ತಾರೆ ಎಂದು ಅವರು ವಿಶ್ವಾಸ ವ್ಯಕ್ತಪಡಿಸಿದ್ದಾರೆ.