ನಾನು ಬಿದ್ದು, ಎದ್ದು, ಗೆದ್ದು ಬರುವೆನು- ಫೇಸ್ ಬುಕ್ ನಲ್ಲಿ ಮಾಜಿ ಸಚಿವ ವಿನಯ್ ಕುಲಕರ್ಣಿ ಪೋಸ್ಟ್…

ಬೆಂಗಳೂರು,ನವೆಂಬರ್,6,2020(www.justkannada.in):  ಯೋಗೇಶ್ ಗೌಡ ಹತ್ಯೆ ಪ್ರಕರಣದಲ್ಲಿ ಬಂಧಿತರಾಗಿರುವ ಮಾಜಿ ಸಚಿವ ವಿನಯ್ ಕುಲಕರ್ಣಿ ನಾನು ಬಿದ್ದು, ಎದ್ದು, ಗೆದ್ದು ಬರುವೆನು ಎಂದು ಫೇಸ್ ಬುಕ್ ನಲ್ಲಿ ಪೋಸ್ಟ್ ಮಾಡಿದ್ದಾರೆ.jk-logo-justkannada-logo

 ಫೇಸ್ ಬುಕ್ ನಲ್ಲಿ ಪೋಸ್ಟ್ ಮಾಡಿರುವ ವಿನಯ್ ಕುಲಕರ್ಣಿ, ಬಿದ್ದು ಎದ್ದು ಗೆದ್ದು ಬರುವೆನು, ಸತ್ಯದ ತಳಹದಿಯಿಂದ ಎದ್ದು ಗೆದ್ದು ಬರುವೆನು. ಸುಳ್ಳು ಕುಣಿಯುತ್ತಿರುವಾಗ ಸತ್ಯ ಅಳುತ್ತದೆ ಆದರೆ ಸತ್ಯ ಎದ್ದು ನಿಂತಾಗ ಸುಳ್ಳು ಸತ್ತೆ ಹೋಗುತ್ತದೆ’. ಸತ್ಯಕ್ಕೆ ಸೋಲಿಲ್ಲ. ನನ್ನೆಲ್ಲಾ ಪ್ರೀತಿ ಪಾತ್ರರಿಗೆ ನನ್ನ ಮೇಲಿಟ್ಟಿರುವ ನಂಬಿಕೆಗೆ ನಾನು ಚಿರಋಣಿ, ನಿಮ್ಮೆಲ್ಲರ ಹಾರೈಕೆ ಹಾಗೂ ನಂಬಿಕೆ ಎಂದು ಸುಳ್ಳಾಗುವುದಿಲ್ಲ ಇಂತಿ ನಿಮ್ಮ ವಿನಯ್ ಕುಲಕರ್ಣಿ ಎಂದು ಪೋಸ್ಟ್ ಮಾಡಿದ್ದಾರೆ. I will come - rise and win- Former Minister -Vinay Kulkarni- posted - Facebook.

2016ರಲ್ಲಿ ಜಿಲ್ಲಾ ಪಂಚಾಯತ್ ಸದಸ್ಯ ಯೋಗೀಶ್ ಗೌಡರ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಜಿ ಸಚಿವ ವಿನಯ್ ಕುಲಕರ್ಣಿ ಅವರನ್ನ ಸಿಬಿಐ ನಿನ್ನೆ ವಶಕ್ಕೆ ಪಡೆದು ವಿಚಾರಣೆ ನಡೆಸಿ ಬಂಧಿಸಿತ್ತು.  ನಂತರ ವಿನಯ್ ಕುಲಕರ್ಣಿ ಅವರನ್ನ ಕೋರ್ಟ್ ಗೆ ಹಾಜರು ಪಡಿಸಲಾಗಿತ್ತು. ವಿನಯ್ ಕುಲಕರ್ಣಿ ನ್ಯಾಯಾಂಗ ಬಂಧನದಲ್ಲಿದ್ದಾರೆ. ಈ ಬಗ್ಗೆ  ತಮ್ಮ ಅಧಿಕೃತ ಫೇಸ್ ಬುಕ್ ಖಾತೆಯಲ್ಲಿ ಪ್ರತಿಕ್ರಿಯೆ ನೀಡಿರುವ ಅವರು, ಈ ಪ್ರಕರಣದಲ್ಲಿ ಆರೋಪಮುಕ್ತನಾಗಿ ಹೊರಬರುವ ವಿಶ್ವಾಸವನ್ನು ವ್ಯಕ್ತಪಡಿಸಿದ್ದಾರೆ.

Key words: I will come – rise and win- Former Minister -Vinay Kulkarni- posted – Facebook.