ಚುನಾವಣೆಯಲ್ಲಿ ನಾನು ಸ್ಪರ್ಧೆ ಮಾಡೇ ಮಾಡುತ್ತೇನೆ-ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ.

ದಕ್ಷಿಣ ಕನ್ನಡ, ಮಾರ್ಚ್,11,2024(www.justkannada.in): ತಮ್ಮ ವಿರುದ್ದ ಗೋ ಬ್ಯಾಕ್ ಅಭಿಯಾನ ನಡೆಸುತ್ತಿರುವವರ ವಿರುದ್ದ ಗರಂ ಆಗಿರುವ ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ, ಚುನವಣೆಯಲ್ಲಿ ನಾನು ಸ್ಪರ್ಧೆ ಮಾಡೇ ಮಾಡುತ್ತೇನೆ ಎಂದು ತಿಳಿಸಿದ್ದಾರೆ.

ಇಂದು ಮಾಧ್ಯಮಗಳ ಜೊತೆ ಮಾತನಾಡಿದ ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ, ನಾನು ಚುನಾವಣೆಯಲ್ಲಿ ಸ್ಪರ್ಧೆ ಮಾಡಿಯೇ ಮಾಡುತ್ತೇನೆ.  ಒಂದೆರಡು ದಿನಗಳಲ್ಲಿ ಬಿಜೆಪಿ ಟಿಕೆಟ್ ಘೋಷಣೆಯಾಗಲಿದೆ. ಭಾರತೀಯ ಜನತಾ ಪಾರ್ಟಿಯ ನಿರ್ಧಾರಕ್ಕೆ ನಾವೆಲ್ಲ ಬದ್ಧರಾಗಿದ್ದೇವೆ ಎಂದರು.

ರಾಜಕೀಯದಲ್ಲಿ ಗೆಲ್ಲುವ ಕ್ಷೇತ್ರವನ್ನು ಎಲ್ಲರೂ ಕೇಳುತ್ತಾರೆ. ಸೀಟು ಕೇಳುವಾಗ ಗೊಂದಲ ಆಗುತ್ತದೆ, ಇದಕ್ಕೂ ಚುನಾವಣೆಗೂ ಸಂಬಂಧ ಇಲ್ಲ. ನಾನು ಸ್ಪರ್ಧೆ ಮಾಡೇ ಮಾಡುತ್ತೇನೆ, ಚುನಾವಣಾ ಮಂಡಳಿ ನಿರ್ಧಾರಕ್ಕೆ ಬದ್ಧ ಎಂದು ಶೋಭಾ ಕರಂದ್ಲಾಜೆ  ತಿಳಿಸಿದರು.

Key words: I will -compete – elections-Union Minister- Shobha Karandlaje.