ಬೆಂಗಳೂರು,ಆಗಸ್ಟ್,28,2026 (www.justkannada.in): ಪಶುವೈದ್ಯಾಧಿಕಾರಿಗಳ ನೇಮಕಾತಿಯಲ್ಲಿ ಅಕ್ರಮ ಹಗರಣಕ್ಕೆ ಸಂಬಂಧಿಸಿದಂತೆ ಇಡಿ ದಾಳಿ ಬೆನ್ನಲ್ಲೆ ನಾಪತ್ತೆಯಾಗಿದ್ದ ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ಇದೀಗ ಸಿಐಡಿ ವಿಚಾರಣೆಗೆ ಹಾಜರಾಗಿದ್ದಾರೆ.
ಜ್ಞಾನೇಂದ್ರ ಕುಮಾರ್ ಈ ಹಿಂದೆ ಕೆಪಿಎಸ್ ಸಿ ಪರೀಕ್ಷಾ ನಿಯಂತ್ರಕರಾಗಿ ಕರ್ತವ್ಯ ನಿರ್ವಹಿಸಿದ್ದರು. ಕೆಪಿಎಸ್ ಸಿಯಲ್ಲಿ ಪಶುವೈದ್ಯಾಧಿಕಾರಿಗಳ ನೇಮಕಾತಿಯಲ್ಲಿ ಅಕ್ರಮ ಹಗರಣಕ್ಕೆ ಸಂಬಂಧಿಸಿದಂತೆ ಇಡಿ ದಾಳಿಯಾಗಿತ್ತು.
ಈ ನಡುವೆ ಇಡಿ ದಾಳಿ ಬೆನ್ನಲ್ಲೆ ಕಳೆದೊಂದು ವಾರದಿಂದ ಜ್ಞಾನೇಂದ್ರ ಕುಮಾರ್ ನಾಪತ್ತೆಯಾಗಿದ್ದರು. ಇದೀಗ ಪ್ರತ್ಯಕ್ಷರಾಗಿದ್ದು ಸಿಐಡಿ ವಿಚಾರಣೆಗೆ ಹಾಜರಾಗಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ.
Key words: KPSC scam, Missing, IAS officer, Gyanendra Kumar, CID







