Thursday, August 20, 2026

BDA Apartments

Home Front Page ಐಸಿಸಿ ಏಕದಿನ ಶ್ರೇಯಾಂಕ: ಕೊಯ್ಲಿ ನಂ.1 ಸ್ಥಾನ ಮತ್ತಷ್ಟು ಭದ್ರ

ಐಸಿಸಿ ಏಕದಿನ ಶ್ರೇಯಾಂಕ: ಕೊಯ್ಲಿ ನಂ.1 ಸ್ಥಾನ ಮತ್ತಷ್ಟು ಭದ್ರ

ಬೆಂಗಳೂರು, ಏಪ್ರಿಲ್ 1, 2021 (www.justkannada.in): ಐಸಿಸಿ ಏಕದಿನ ಶ್ರೇಯಾಂಕದಲ್ಲಿ ಟೀಮ್ ಇಂಡಿಯಾದ ನಾಯಕ ವಿರಾಟ್ ಕೊಹ್ಲಿ ನಂ.1ಸ್ಥಾನದಲ್ಲೇ ಮುಂದುವರೆದಿದ್ದಾರೆ.

ಇಂಗ್ಲೆಂಡ್ ವಿರುದ್ಧದ ಏಕದಿನ ಸರಣಿಯಲ್ಲಿ ಕೊಹ್ಲಿ ಉತ್ತಮ ಪ್ರದರ್ಶನದ ಹಿನ್ನೆಲೆಯಲ್ಲಿ ನಂ.1 ಸ್ಥಾನ ಮತ್ತಷ್ಟು ಭದ್ರವಾಗಿದೆ.. ವಿರಾಟ್ ಕೊಹ್ಲಿ ಖಾತೆಯಲ್ಲೀಗ 857 ಅಂಕಗಳಿವೆ. ದ್ವಿತೀಯ ಸ್ಥಾನದಲ್ಲಿರುವ ಪಾಕಿಸ್ತಾನದ ಬಾಬರ್ ಅಝಾಮ್ 837 ಅಂಕ ಕಲೆ ಹಾಕಿದ್ದಾರೆ.

ತೃತೀಯ ಸ್ಥಾನದಲ್ಲಿ ರೋಹಿತ್ ಶರ್ಮಾ ಇದ್ದು, 825 ಪಾಯಿಂಟ್ಸ್‌ ಗಳಿಸಿದ್ದಾರೆ. 4ನೇ ಸ್ಥಾನದಲ್ಲಿ ನ್ಯೂಜಿಲೆಂಡ್‌ನ ರಾಸ್ ಟೇಲರ್, 5ನೇ ಸ್ಥಾನದಲ್ಲಿ ಆಸ್ಟ್ರೇಲಿಯಾದ ಆಯರನ್ ಫಿಂಚ್ ಇದ್ದಾರೆ.

ಬೌಲಿಂಗ್‌ ರ್‍ಯಾಂಕಿಂಗ್‌ನಲ್ಲಿ ನ್ಯೂಜಿಲೆಂಡ್‌ನ ಟ್ರೆಂಟ್ ಬೌಲ್ಟ್, ಅಫ್ಘಾನಿಸ್ತಾನದ ಮುಜೀಬ್ ಉರ್ ರಹ್ಮಾನ್, ನ್ಯೂಜಿಲೆಂಡ್‌ನ ಮ್ಯಾಟ್ ಹೆನ್ರಿ ಕ್ರಮವಾಗಿ ಮೊದಲ ಮೂರು ಸ್ಥಾನ ಪಡೆದಿದ್ದಾರೆ. ಭಾರತದ ವೇಗಿ ಜಸ್‌ಪ್ರೀತ್‌ ಬೂಮ್ರಾ 4ನೇ ಸ್ಥಾನಕ್ಕೆ ಕುಸಿದಿದ್ದಾರೆ.