ಐಸಿಸಿ ಟೆಸ್ಟ್ ರ‍್ಯಾಂಕಿಂಗ್‌: ಕೊಹ್ಲಿಯೇ ನಂಬರ್ 1 !

ದುಬೈ, ಡಿಸೆಂಬರ್ 25, 2019 (www.justkannada.in): ಟೀಂ ಇಂಡಿಯಾ 2019ನೇ ಕ್ರಿಕೆಟ್ ವರ್ಷವನ್ನು ಅದ್ಭುತ ಪ್ರದರ್ಶನದೊಂದಿಗೆ ಕೊನೆಗೊಳಿಸಿದ್ದು, ಇದೀಗ ಅಂತಾರಾಷ್ಟ್ರೀಯ ಕ್ರಿಕೆಟ್ ಸಮಿತಿ ಐಸಿಸಿ ವರ್ಷದ ಟೆಸ್ಟ್ ರ‍್ಯಾಂಕಿಂಗ್‌ ಬಿಡುಗಡೆ ಮಾಡಿದೆ.

ಕೊನೆಯ ಐಸಿಸಿ ಟೆಸ್ಟ್ ರ‍್ಯಾಂಕಿಂಗ್‌ ನಲ್ಲೂ ಟೀಂ ಇಂಡಿಯಾ ನಾಯಕ ವಿರಾಟ್ ಕೊಹ್ಲಿ ಬ್ಯಾಟಿಂಗ್ ರ‍್ಯಾಂಕಿಂಗ್‌ ನಲ್ಲಿ ಅಗ್ರ ಸ್ಥಾನ ಕಾಯ್ದುಕೊಂಡಿದ್ದಾರೆ. ಐಸಿಸಿ ಟೆಸ್ಟ್ ಬ್ಯಾಟಿಂಗ್ ರ‍್ಯಾಂಕಿಂಗ್‌ ನಲ್ಲಿ ಕೊಹ್ಲಿ ಒಟ್ಟು 928 ರೇಟಿಂಗ್ ಗಳೊಂದಿಗೆ ಅಗ್ರ ಸ್ಥಾನದಲ್ಲಿ ಮುಂದುವರೆದಿದ್ದಾರೆ.

911 ರೇಟಿಂಗ್ಸ್ ಹೊಂದಿರುವ ಆಸ್ಟ್ರೇಲಿಯಾದ ಸ್ಟೀವ್ ಸ್ಮಿತ್ 2ನೇ ಸ್ಥಾನದಲ್ಲಿದ್ದಾರೆ. 864 ಅಂಕಗಳನ್ನು ಹೊಂದಿರುವ ನ್ಯೂಜಿಲೆಂಡ್ ತಂಡದ ಕೇನ್ ವಿಲಿಯಮ್ಸನ್ 3ನೇ ಸ್ಥಾನದಲ್ಲಿದ್ದಾರೆ.