ICC TEST RANKING: ನಂಬರ್ ಒನ್ ಪಟ್ಟದಲ್ಲಿ ಮುಂದುವರಿದ ಕೊಹ್ಲಿ

ದುಬೈ, ಆಗಸ್ಟ್ 28, 2019 (www.justkannada.in): ಐಸಿಸಿ ಟೆಸ್ಟ್ RANKINGನಲ್ಲಿ ವಿರಾಟ್ ಕೊಹ್ಲಿ ನಂ.1 ಪಟ್ಟ ಮುಂದುವರಿದಿದ್ದು, ಟಾಪ್-10 ಗೆ ಜಸ್ಪ್ರಿತ್ ಬುಮ್ರಾ ಎಂಟ್ರಿ ಕೊಟ್ಟಿದ್ದಾರೆ.

ಅಂತಾರಾಷ್ಟ್ರೀಯ ಮಂಡಳಿ ನೂತನವಾಗಿ ಬಿಡುಗಡೆ ಮಾಡಿರುವ ಟೆಸ್ಟ್ ಬ್ಯಾಟಿಂಗ್ RANKING ಪಟ್ಟಿಯಲ್ಲಿ ಭಾರತ ತಂಡದ ನಾಯಕ ವಿರಾಟ್ ಕೊಹ್ಲಿ ಅಗ್ರಸ್ಥಾನ ಕಾಪಾಡಿಕೊಂಡಿದ್ದಾರೆ.

ಆಸ್ಟ್ರೇಲಿಯಾದ ಮಾಜಿ ನಾಯಕ ಸ್ಟೀವ್ ಸ್ಮಿತ್ ಗಿಂತ ಆರು ಪಾಯಿಂಟ್ ಗಳ ಮುನ್ನಡೆಯೊಂದಿಗೆ ಕೊಹ್ಲಿ ಅಗ್ರಸ್ಥಾನ ಕಾಯ್ದುಕೊಂಡಿದ್ದಾರೆ. ಬೌಲಿಂಗ್ ವಿಭಾಗದಲ್ಲಿ ಬಲಗೈ ವೇಗಿ ಜಸ್ಪ್ರಿತ್ ಬುಮ್ರಾ ಮೊದಲ ಬಾರಿಗೆ ಅಗ್ರ 10 ರೊಳಗೆ ಪ್ರವೇಶ ಪಡೆದುಕೊಂಡಿದ್ದು, 7 ನೇ ಸ್ಥಾನಕ್ಕೆ ನೆಗೆತ ಕಂಡಿದ್ದಾರೆ.

ಬ್ಯಾಟಿಂಗ್ ವಿಭಾಗದಲ್ಲಿ ನ್ಯೂಜಿಲೆಂಡ್ ತಂಡದ ನಾಯಕ ಕೇನ್ ವಿಲಿಯಮ್ಸನ್ ಹಾಗೂ ಭಾರತ ಚೇತೇಶ್ವರ್ ಪೂಜಾರ ಕ್ರಮವಾಗಿ 3 ಮತ್ತು 4 ನೇ ಸ್ಥಾನ ಅಲಂಕರಿಸಿದ್ದಾರೆ.