Saturday, August 15, 2026

BDA Apartments

Home Crime ಇದ್ರೀಷ್ ಪಾಷಾ ಹತ್ಯೆ ಪ್ರಕರಣ: ತಲೆಮರೆಸಿಕೊಂಡಿದ್ದ ಪುನೀತ್​ ಕೆರೆಹಳ್ಳಿ ಅರೆಸ್ಟ್

ಇದ್ರೀಷ್ ಪಾಷಾ ಹತ್ಯೆ ಪ್ರಕರಣ: ತಲೆಮರೆಸಿಕೊಂಡಿದ್ದ ಪುನೀತ್​ ಕೆರೆಹಳ್ಳಿ ಅರೆಸ್ಟ್

ಬೆಂಗಳೂರು,ಏಪ್ರಿಲ್,5,2023(www.justkannada.in):  ಇದ್ರೀಷ್ ಪಾಷಾ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ  ಪುನೀತ್ ಕೆರೆಹಳ್ಳಿ ಹಾಗೂ ಅವರ ನಾಲ್ವರು ಸಹಚರರನ್ನು  ರಾಜಸ್ಥಾನದಲ್ಲಿ ಪೊಲೀಸರು ಬಂಧಿಸಿದ್ದಾರೆ.

ಕನಕಪುರದ ಸಾತನೂರು ಬಳಿ ಪುನೀತ್‌ ಕೆರೆಹಳ್ಳಿ ಹಾಗೂ ತಂಡ ಗೋವುಗಳನ್ನು ಸಾಗಿಸುತ್ತಿದ್ದ ಕ್ಯಾಂಟರ್‌ ತಡೆದು ಜಾನುವಾರು ರಕ್ಷಣೆ ಮಾಡಿದ್ದರು. ಆದರೆ, ಮರುದಿನ ಅಂದರೆ ಏಪ್ರಿಲ್‌ 1 ರಂದು ಕ್ಯಾಂಟರ್‌ನಲ್ಲಿದ್ದ ಮಂಡ್ಯದ ಗುತ್ತಲು ನಿವಾಸಿ ಇದ್ರೀಷ್‌ ಪಾಷಾ ಅನುಮಾನಾಸ್ಪದವಾಗಿ ಸಾವನ್ನಪ್ಪಿದ್ದರು. ಇದ್ರೀಷ್‌ ಪಾಷಾ ಅವರ ಮೃತದೇಹ ಸಾತನೂರು ಗ್ರಾಮದ ಬಳಿ ಶವವಾಗಿ ಪತ್ತೆಯಾಗಿದ್ದರು.

ಈ ಕುರಿತು ಪ್ರಕರಣ ದಾಖಲಾಗಿತ್ತು.  ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಹಿಂದೂ ಸಂಘಟನೆ ಕಾರ್ಯಕರ್ತ ಪುನೀತ್​ ಕೆರೆಹಳ್ಳಿ ಬಂಧನವಾಗಿದೆ. ಕಳೆದ ಒಂದು ವಾರದಿಂದ ತಲೆಮರೆಸಿಕೊಂಡಿದ್ದ ಪುನೀತ್ ‌ಕೆರೆಹಳ್ಳಿ ಸೇರಿದಂತೆ ಒಟ್ಟು ಐವರನ್ನು ರಾಜಸ್ಥಾನದಲ್ಲಿ ಬಂಧಿಸುವಲ್ಲಿ ಸಾತನೂರು ಠಾಣೆ ಪೊಲೀಸರು ಯಶಸ್ವಿಯಾಗಿದ್ದಾರೆ. ಸದ್ಯ ಆರೋಪಿಗಳನ್ನು ಅಲ್ಲಿಂದ ಕರೆತರಲಾಗುತ್ತಿದೆ ಎಂದು ಹೇಳಲಾಗುತ್ತಿದೆ.

Key words: Idrish Pasha –murder- case-Puneet Kerehalli- absconding- arrested