ಸಿದ್ದರಾಮಯ್ಯ ಸಿಎಂ ಆದರೆ ಬೆಂಬಲ ನೀಡುವೆ: ಜನಾರ್ದನ ರೆಡ್ಡಿ

ಬೆಂಗಳೂರು, ಮೇ 07, 2023 (www.justkannada.in): ಮಾಜಿ ಸಿಎಂ ಸಿದ್ದರಾಮಯ್ಯ ಮುಖ್ಯಮಂತ್ರಿ ಆದರೆ ಅವರಿಗೆ ಬೆಂಬಲ ನೀಡುವುದಾಗಿ ಮಾಜಿ ಸಚಿವ ಜನಾರ್ದನ ರೆಡ್ಡಿ ಹೇಳಿದ್ದಾರೆ.

ರಾಯಚೂರು ಜಿಲ್ಲೆಯಲ್ಲಿ ಕೆಆರ್‍ ಪಿ ಅಭ್ಯರ್ಥಿ ಪರ ಪ್ರಚಾರ ನಡೆಸಿ ಮಾತನಾಡಿದ ಅವರು, ಮಾಜಿ ಸಿಎಂ ಸಿದ್ದರಾಮಯ್ಯ ಅವರು ಸಿಎಂ ಆದ್ರೆ ಅವರಿಗೆ ಬೆಂಬಲ ನೀಡುವುದಾಗಿ ಸಪೋರ್ಟ್ ಮಾಡ್ತೀನಿ ಎಂದಿದ್ದಾರೆ.

ಪ್ರಧಾನಿ ನರೇಂದ್ರ ಮೋದಿ ಸೇರಿದಂತೆ ಹಲವು ಬಿಜೆಪಿ ನಾಯಕರ ವಿರುದ್ಧ ಮಾತನಾಡಿದ ಜನಾರ್ಧನ ರೆಡ್ಡಿ, ಯಾವುದೇ ಕಾರಣಕ್ಕೂ ಅವರ ಆಟ ನಡೆಯಲ್ಲ ಎಂದು ಕಿಡಿಕಾರಿದ್ದಾರೆ.

ಕೆ.ಆರ್.ಪಿ ಪಕ್ಷದ ಪ್ರಣಾಳಿಕೆಯ ಭರವಸೆಗಳನ್ನ ಒಪ್ಪಿದರೆ ಹಾಗೂ ನನ್ನ ಜೊತೆ ಭರವಸೆ ಪೂರೈಸುತ್ತೇನೆ ಅಂತ ಸಿದ್ದರಾಮಯ್ಯ ಹೇಳಿದರೆ ಅವರಿಗೆ ನಾನು ಬೆಂಬಲ ನೀಡ್ತಿನಿ ಎಂದು ತಿಳಿಸಿದ್ದಾರೆ.