ಮತ್ತೆ ಬಿಜೆಪಿ ಸರಕಾರ ಅಧಿಕಾರಕ್ಕೆ ಬಂದರೆ ಮಹಿಳೆಯರಿಗೆ ಉಚಿತ ಬಸ್ ಪಾಸ್: ಸಚಿವ ಶ್ರೀರಾಮುಲು

ಬೆಂಗಳೂರು, ಮಾರ್ಚ್ 13, 2022 (www.justkannada.in): ರಾಜ್ಯದಲ್ಲಿ ಬಿಜೆಪಿ ಸರ್ಕಾರ ಅಧಿಕಾರಕ್ಕೆ ಬಂದ್ರೇ, ಮಹಿಳೆಯರಿಗೆ ಉಚಿತ ಬಸ್ ಪಾಸ್ ವಿತರಿಸೋದಾಗಿ ಸಾರಿಗೆ ಸಚಿವ ಬಿ.ಶ್ರೀರಾಮುಲು ಘೋಷಣೆ ಮಾಡಿದ್ದಾರೆ.

ರಾಜ್ಯ ಸರ್ಕಾರ ಕಟ್ಟಡ ಕಾರ್ಮಿಕರು, ಗಾರ್ಮೆಂಟ್ಸ್ ನೌಕರರಿಗೆ ರಿಯಾಯಿತಿ ದರದಲ್ಲಿ ಉಚಿತ ಬಸ್ ಪಾಸ್ ವಿತರಣೆ ಮಾಡುತ್ತಿದೆ. ಈಗ ಮತ್ತೆ ಬಿಜೆಪಿ ಸರ್ಕಾರ ಅಧಿಕಾರಕ್ಕೆ ಬಂದ್ರೇ ಉಚಿತ ಬಸ್ ಪಾಸ್ ವಿತರಣೆ ಮಾಡುವುದಾಗಿ ಘೋಷಣೆ ಮಾಡಿದ್ದಾರೆ.

ಬೆಂಗಳೂರಿನ ಮಹಿಳಾ ನೌಕರರಿಗೆ ಉಚಿತ ಬಿಎಂಟಿಸಿ ಬಸ್ ಪಾಸ್ ವಿತರಿಸಲಾಗುತ್ತಿದೆ. ಈಗ ಮತ್ತೆ ರಾಜ್ಯದಲ್ಲಿ ಬಿಜೆಪಿ ಸರ್ಕಾರ ಅಧಿಕಾರಕ್ಕೆ ಬಂದ್ರೇ, ರಾಜ್ಯಾಧ್ಯಂತ ಮಹಿಳೆಯರಿಗೆ ಉಚಿತ ಬಸ್ ಪಾಸ್ ವಿತರಿಸೋದಾಗಿ ಹೇಳಿದ್ದಾರೆ.

If the BJP government comes to power again, free bus pass for womens: Minister Sriramulu