ರಾಜ್ಯದಲ್ಲಿ ಜೆಡಿಎಸ್ ಅಧಿಕಾರಕ್ಕೆ ಬಂದರೆ ಪಂಚರತ್ನ ಯೋಜನೆ ಜಾರಿ: ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ

ಬೆಂಗಳೂರು, ಮೇ 08, 2022 (www.justkannada.in): ರಾಜ್ಯದಲ್ಲಿ ಜೆಡಿಎಸ್ ಅಧಿಕಾರಕ್ಕೆ ಬಂದರೆ ಶಿಕ್ಷಣ, ಆರೋಗ್ಯ, ರೈತರ ಅಭಿವೃದ್ಧಿ ಸೇರಿ ಪಂಚರತ್ನ ಯೋಜನೆ ಜಾರಿಗೊಳಿಸಲಾಗುವುದು ಎಂದು ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ ಹೇಳಿದ್ದಾರೆ.

ಜನತಾ ಜಲಧಾರೆ ರಥಯಾತ್ರೆಯ ಅಂಗವಾಗಿ ದಾವಣಗೆರೆ ಜಿಲ್ಲೆಯ ಹರಿಹರದಲ್ಲಿ ಆಯೋಜಿಸಿದ್ದ ಸಮಾವೇಶದಲ್ಲಿ ಮಾತನಾಡಿದ ಅವರು, ಉಚಿತ ಶಿಕ್ಷಣ, ಆರೋಗ್ಯ, ರೈತರ ಉನ್ನತಿ, ಯುವಜನತೆಗೆ ಸ್ವ ಉದ್ಯೋಗ, ಪ್ರತಿ ಕುಟುಂಬಕ್ಕೂ ಸ್ವಂತ ಮನೆ ಸೌಕರ್ಯ ಒದಗಿಸುವ ಪಂಚರತ್ನ ಯೋಜನೆಯನ್ನು ಪಕ್ಷ ರೂಪಿಸಿದೆ ಎಂದು ಹೇಳಿದ್ದಾರೆ.

ರೈತರ 25 ಸಾವಿರ ಕೋಟಿ ರೂ. ಸಾಲ ಮನ್ನಾ ಮಾಡಿದ್ದೆ. ಪಕ್ಷ ಅಧಿಕಾರಕ್ಕೆ ಬಂದರೆ ಸ್ತ್ರೀ ಶಕ್ತಿ ಸಂಘಗಳ 1 ಸಾವಿರ ಕೋಟಿ ರೂ. ಸಾಲ ಮನ್ನಾ ಮಾಡಲಾಗುವುದು ಎಂದು ಎಚ್ಡಿಕೆ ತಿಳಿಸಿದ್ದಾರೆ.