ವಿದ್ಯುತ್ ಬಿಲ್ ನಲ್ಲಿ ಅಕ್ರಮ:  ಮೂವರು ಸಿಬ್ಬಂದಿ ಅಮಾನತು.

ಬೆಂಗಳೂರು ಸೆಪ್ಟಂಬರ್,4,2021(www.justkannada.in): ವಿದ್ಯುತ್ ಬಿಲ್ ನಲ್ಲಿ ತಿದ್ದುಪಡಿ ಮಾಡಿ ಬೆಸ್ಕಾಂಗೆ ನಷ್ಟ ಉಂಟು ಮಾಡಿದ ಮೂವರು ಸಿಬ್ಬಂದಿಯನ್ನು ಅಮಾನತು ಮಾಡಿರುವುದಾಗಿ ಇಂಧನ ಮತ್ತು ಕನ್ನಡ ಹಾಗೂ ಸಂಸ್ಕೃತಿ ಸಚಿವ ಸುನಿಲ್ ಕುಮಾರ್ ಹೇಳಿದ್ದಾರೆ.

ಮುಳಬಾಗಿಲು ಉಪವಿಭಾಗದ ಮೆಹಬೂಬ್ ಪಾಷ, ಕಿರಿಯ ಸಹಾಯಕ, ಗಾಯತ್ರಮ್ಮ ,ಕಿರಿಯ ಸಹಾಯಕಿ ಹಾಗೂ ಸುಜಾತಮ್ಮ, ಕಿರಿಯ ಸಹಾಯಕಿ ,ಈ ಮೂವರು ಅಮಾನತಿಗೊಳಗಾದ ಸಿಬ್ಬಂದಿಯಾಗಿದ್ದಾರೆ.

ಈ ಕುರಿತು ಮಾತನಾಡಿದ ಮಾಹಿತಿ ನೀಡಿದ ಸಚಿವ ಸುನೀಲ್ ಕುಮಾರ್,  ಮೂವರು ಸಿಬ್ಬಂದಿ ಪ್ರತಿ ಮಾಹೆ ಗ್ರಾಹಕರಿಗೆ ವಿದ್ಯುತ್ ಬಿಲ್ಲು ವಿತರಿಸುವ ವೇಳೆಯಲ್ಲಿ ಕೆಲವು ಬಿಲ್ಲುಗಳನ್ನು ಮಾರ್ಪಾಟು ಮಾಡಿ ಅದರ ಮೊತ್ತವನ್ನು ಕಡಿಮೆ ಮಾಡಿ ಆ ಮೂಲಕ ಬೆಸ್ಕಾಂಗೆ ಬರಬೇಕಾದ ವಾಸ್ತವಿಕ ಆದಾಯದಲ್ಲಿ ನಷ್ಟ ಉಂಟಾಗಲು ಕಾರಣರಾಗಿದ್ದಾರೆ, ಈ ಹಿನ್ನೆಲೆಯಲ್ಲಿ ಇವರ ಮೇಲೆ ಕೋಲಾರ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ಕೂಡ  ದಾಖಲಿಸಲಾಗಿದೆ ಎಂದು ಹೇಳಿದ್ದಾರೆ.

ತಾವು ಇಲಾಖೆಯಲ್ಲಿ ಯಾವುದೇ ರೀತಿಯ ಭ್ರಷ್ಟಾಚಾರವನ್ನು ಸಹಿಸುವುದಿಲ್ಲ, ಅಕ್ರಮ ಎಸಗಿ ಆ ಮೂಲಕ ಇಲಾಖೆಗೆ ನಷ್ಟವುಂಟು ಮಾಡುವ ಯಾವುದೇ ಅಧಿಕಾರಿ, ಸಿಬ್ಬಂದಿ ಇರಲಿ ಅವರ ಮೇಲೆ ಮುಲಾಜಿಲ್ಲದೆ ಕ್ರಮ ವಹಿಸಲಾಗುವುದು ಎಂದು ಸಚಿವ ಸುನಿಲ್ ಕುಮಾರ್ ತಿಳಿಸಿದ್ದಾರೆ.

ಪ್ರಸ್ತುತ ಈ ಮೂವರು ಸಿಬ್ಬಂದಿ ಗಳು ಬೇರೆ, ಬೇರೆ ಐಪಿ ವಿಳಾಸಗಳ ಗಣಕಯಂತ್ರಗಳಲ್ಲಿ ಐಡಿ ಗಳನ್ನು ಉಪಯೋಗಿಸಿ ವಂಚನೆ ಎಸಗಿರುವುದು ದೃಢವಾಗಿರುವುದರಿಂದ ಹಾಗೂ 8 ಆರ್ ಆರ್  ಸಂಖ್ಯೆಗಳಲ್ಲಿ ಒಟ್ಟು 444966-00 ಗಳಷ್ಟು ಮೊತ್ತ  ಕಂಪನಿಗೆ ನಷ್ಟವಾಗಿರುವುದರಿಂದ ಇವರ ಮೇಲೆ ಇಲಾಖಾ ವಿಚಾರಣೆ ನಡೆಸಿ ಶಿಸ್ತು ಕ್ರಮ ಕೈಗೊಳ್ಳಲು ಆದೇಶಿಸಲಾಗಿದೆ, ಜೊತೆಗೆ ಪೊಲೀಸ್ ಠಾಣೆಯಲ್ಲಿ ಮೊಕದ್ದಮೆ ಯನ್ನು ಸಹ  ದಾಖಲಿಸಲಾಗಿದೆ ಎಂದು ಅವರು ಹೇಳಿದ್ದಾರೆ.

ENGLISH SUMMARY…

Discrepancies in electric bill: Three staff by using dismissed
Bengaluru, September 4, 2021 (www.justkannada.in): Power and Kannada and Culture Department Minister Sunil Kumar have informed that three staff members of BESCOM who had modified the electric bill causing a loss to the BESCOM have been suspended.
The three persons who have been suspended are Mehboob Pasha, Junior Assistant, Mulabagilu Sub Division, Gayatramma, and Sujatamma, Junior Assistants.
Sunil Kumar has informed that the trio used to modify the monthly electric bills while distributing them to the customers, reducing the amount, causing a loss to BESCOM. Hence, all three have been suspended and an FIR has been registered at the Kolar Police Station.
By using their IDs in different IP addresses in the computer all the three staff members have cheated BESCOM. BESCOM has incurred a loss of a sum of Rs.4,44,966.00 in 8 RR numbers. All the three have been dismissed after finding them guilty and orders have been issued to initiate disciplinary action against them.
Keywords: BESCOM/ Minister Sunil Kumar/ BESCOM staff/ suspended/ discrepancies

Key words: Illegal -electricity –bill- Three- staff –suspended-minister- sunil kumar