Friday, September 18, 2026

BDA Apartments

ಅಕ್ರಮ ಮದ್ಯ ಮಾರಾಟದ ವಿರುದ್ಧ ಕಠಿಣ ಕ್ರಮ – ಸಚಿವ ಆರ್. ಬಿ. ತಿಮ್ಮಾಪುರ BDA JK_Adv BDA Adv
Home Front Page ಅಕ್ರಮ ಮದ್ಯ ಮಾರಾಟದ ವಿರುದ್ಧ ಕಠಿಣ ಕ್ರಮ – ಸಚಿವ ಆರ್. ಬಿ. ತಿಮ್ಮಾಪುರ

ಅಕ್ರಮ ಮದ್ಯ ಮಾರಾಟದ ವಿರುದ್ಧ ಕಠಿಣ ಕ್ರಮ – ಸಚಿವ ಆರ್. ಬಿ. ತಿಮ್ಮಾಪುರ

ಬೆಳಗಾವಿ, ಡಿಸೆಂಬರ್, 19,2024 (www.justkannada.in): ರಾಜ್ಯದಲ್ಲಿ ಅಕ್ರಮ ಮದ್ಯ ಮಾರಾಟದ ವಿರುದ್ಧ ಕಠಿಣ ಕ್ರಮ  ಕೈಗೊಳ್ಳಲಾಗುತ್ತಿದೆ ಎಂದು ಅಬಕಾರಿ ಸಚಿವ ಆರ್. ಬಿ. ತಿಮ್ಮಾಪುರ ಸ್ಪಷ್ಟಪಡಿಸಿದರು.

ಇಂದು ವಿಧಾನ ಪರಿಷತ್ತಿನಲ್ಲಿ ಸದಸ್ಯ ಸುನಿಲ್ ಗೌಡ ಪಾಟೀಲ್ ಅವರ ಚುಕ್ಕೆ ಗುರುತಿನ ಪ್ರಶ್ನೆಗೆ ಉತ್ತರಿಸಿದ ಸಚಿವ ಆರ್.ಬಿ ತಿಮ್ಮಾಪುರ, ರಾಜ್ಯದಲ್ಲಿ ಅಕ್ರಮ ಮದ್ಯ ಮಾರಾಟದ ವಿರುದ್ಧ ಕರ್ನಾಟಕ ಅಬಕಾರಿ ಕಾಯ್ದೆ ಅನ್ವಯ ಕಳೆದ ಮೂರು ವರ್ಷಗಳಲ್ಲಿ ಒಟ್ಟು 5751 ದಾಳಿಗಳನ್ನು ನಡೆಸಿ, 4437 ಪ್ರಕರಣಗಳನ್ನು ದಾಖಲಿಸಲಾಗಿದೆ. ಪ್ರಕರಣಗಳಲ್ಲಿ ಭಾಗಿಯಾದ 5021 ಆರೋಪಿತರನ್ನು ದಸ್ತಗಿರಿ ಮಾಡಲಾಗಿದೆ ಎಂದು ತಿಳಿಸಿದರು.

Key words: Strict action, illegal liquor, sale, Minister, R.B. Thimmapura