ಅಕ್ರಮ ಗಣಿಗಾರಿಕೆ ಬಗ್ಗೆ ಸಂಸದೆ ಸುಮಲತಾ ಮಾಹಿತಿ ನೀಡಿದ್ರೆ ಕ್ರಮ- ಸಚಿವ ಮುರುಗೇಶ್ ನಿರಾಣಿ.

ಕಲ್ಬುರ್ಗಿ,ಜುಲೈ,10,2021(www.justkannada.in):  ಕೆಆರ್ ಎಸ್ ಸುತ್ತಾಮುತ್ತಾ ಅಕ್ರಮ ಗಣಿಗಾರಿಕೆ ನಡೆಯುತ್ತಿದ್ದರೆ ಸಂಸದೆ ಸುಮಲತಾ ಅಂಬರೀಶ್ ಮಾಹಿತಿ ನೀಡಲಿ. ಕ್ರಮ ಕೈಗೊಳ್ಳುತ್ತೇವೆ ಎಂದು ಗಣಿ ಮತ್ತು ಭೂ ವಿಜ್ಞಾನ ಸಚಿವ ಮುರುಗೇಶ್ ನಿರಾಣಿ ತಿಳಿಸಿದ್ದಾರೆ.jk

ಕೆಆರ್ ಎಸ್ ಡ್ಯಾಂ ಬಿರುಕು, ಅಕ್ರಮ ಗಣಿಗಾರಿಕೆಗೆ ಸಂಬಂಧಿಸಿದಂತೆ ಸಂಸದೆ ಸುಮಲತಾ ಅಂಬರೀಶ್ ಮತ್ತು ಜೆಡಿಎಸ್ ನಾಯಕರ ನಡುವೆ ಟಾಕ್ ವಾರ್ ಮುಂದುವರೆದಿದೆ. ಈ ಬಗ್ಗೆ ಕಲ್ಬುರ್ಗಿಯಲ್ಲಿ ಮಾಧ್ಯಮಗಳ ಜತೆ ಪ್ರತಿಕ್ರಿಯಿಸಿರುವ ಸಚಿವ ಮುರುಗೇಶ್ ನಿರಾಣಿ, ಎರಡು ಕಡೆಯಿಂದ  ವಿರಾಮ ಹಾಕಬೇಕು. ಕಳೆದ ನಾಲ್ಕು ತಿಂಗಳಿಂದಲೂ ಕೆಆರ್ ಎಸ್ ನ 10 ಕಿ.ಮೀ ಸುತ್ತಾಮುತ್ತಾ ಗಣಿಗಾರಿಕೆ ಸ್ಥಗಿತಗೊಳಿಸಲಾಗಿದೆ. ಅಲ್ಲಿ 70 ವರ್ಷಗಳಿಂದ ಅಕ್ರಮ ಗಣಿಗಾರಿಕೆ ನಡೆಯುತ್ತಿತ್ತು. ಈಗ ಅದಕ್ಕೆ ಬ್ರೇಕ್ ಹಾಕಲಾಗಿದೆ ಎಂದರು.

ಸಿಎಂ ಬದಲಾವಣೆ ವಿಚಾರಕ್ಕೆ ಸಂಬಂಧಿಸಿದಂತೆ ಪ್ರತಿಕ್ರಿಯಿಸಿದ ಸಚಿವ ಮುರುಗೇಶ್ ನಿರಾಣಿ, ಸಿಎಂ ಬದಲಾವಣೆ ಬಗ್ಗೆ ಯಾವುದೇ ಚರ್ಚೆಯಿಲ್ಲ. ಸಿಎಂ ಆಗಲು ನಮ್ಮಲ್ಲಿ ಸಾಕಷ್ಟು ಜನ ಇದ್ದಾರೆ. ಆದರೆ ಸಿಎಂ ಬಿಎಸ್ ಯಡಿಯೂರಪ್ಪ ಸಿಎಂ ಸ್ಥಾನದಲ್ಲಿ ಇದ್ದಾರೆ. ಅವರೇ 2 ವರ್ಷ ಮುಂದುವರೆಯಲಿದ್ದಾರೆ. 2 ವರ್ಷದವರೆಗೆ ಸಿಎಂ ಬದಲಾವಣೆ ಬಗ್ಗೆ ಚರ್ಚೆ ಇಲ್ಲ ಎಂದು ತಿಳಿಸಿದರು.

Key words: Illegal mining –KRS- Minister- Murugesh Nirani.