2015 ರಲ್ಲಿನ ಗೆಜೆಟೆಡ್ ಪ್ರೊಬೇಷನರಿ ಹುದ್ದೆಗಳ ಮೌಲ್ಯಮಾಪನದಲ್ಲಿ ಅಕ್ರಮ-ಕೆಪಿಸಿಸಿ ವಕ್ತಾರ ಎಂ. ಲಕ್ಷ್ಮಣ್ ಆರೋಪ…

ಮೈಸೂರು,ಸೆಪ್ಟಂಬರ್,17,2020(www.justkannada.in): ಕೆಪಿಎಸ್ ಸಿ ಸಂಸ್ಥೆಯ ಡಿಜಿಟಲ್ ಮೌಲ್ಯಮಾಪನದಲ್ಲಿ ಅಕ್ರಮವಾಗಿದೆ. 2015 ರಲ್ಲಿ 428 ಗೆಜೆಟೆಡ್ ಪ್ರೊಬೇಷನರಿ ಹುದ್ದೆಗಳ ಮೌಲ್ಯಮಾಪನದಲ್ಲಿ ಅಕ್ರಮವಾಗಿದೆ ಎಂದು ಕೆಪಿಸಿಸಿ ವಕ್ತಾರ ಎಂ.ಲಕ್ಷ್ಮಣ್ ಆರೋಪಿಸಿದ್ದಾರೆ.jk-logo-justkannada-logo

ನಗರದ ಇಂದಿರಾಗಾಂಧಿ ಕಾಂಗ್ರೆಸ್ ಭವನದಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಕೆಪಿಸಿಸಿ ವಕ್ತಾರ ಎಂ. ಲಕ್ಷ್ಮಣ್ ಕೆಪಿಎಸ್ಸಿ ಮೇಲೆ ಗುರುತರ ಆರೋಪ ಮಾಡಿದ್ದಾರೆ. 2015 ರಲ್ಲಿ 428 ಗೆಜೆಟೆಡ್ ಪ್ರೊಬೇಷನರಿ ಹುದ್ದೆಗಳ ಮೌಲ್ಯಮಾಪನದಲ್ಲಿ ಅಕ್ರಮವಾಗಿದೆ. ಕೆಲ ವಿದ್ಯಾರ್ಥಿಗಳು ಮೌಲ್ಯಮಾಪನದ ಉತ್ತರ ಪತ್ರಿಕೆಯನ್ನು ಆರ್ಟಿಐ ಮೂಲಕ ಪಡೆದು ಹೈ ಕೋರ್ಟ್ ಗೆ ಸಲ್ಲಿಸಿದ್ದಾರೆ. ಕೆಲ ವಿದ್ಯಾರ್ಥಿಗಳು ಡಿಜಿಟಲ್ ಮೌಲ್ಯಮಾಪನದಲ್ಲಿ ಅಂಕಗಳನ್ನು ಬದಲಾವಣೆ ಮಾಡಿದ್ದಾರೆ ಎಂದು ದೂರಿದ್ದಾರೆ. ಇದಕ್ಕೆ ಪೂರಕವೆಂಬಂತೆ ಮಹಾರಾಷ್ಟ್ರ ಮೂಲದ ಇಂಡಿಯನ್ ಸೈಬರ್ ಇನ್ಸ್ಟಿಟ್ಯೂಟ್ ನವರು ಮೌಲ್ಯಮಾಪನದಲ್ಲಿ ಅಕ್ರಮ ನಡೆದಿದೆ ಎಂಬ ವರದಿ ನೀಡಿದ್ದಾರೆ. ಉತ್ತರ ಪತ್ರಿಕೆಯ ಪ್ರತಿಗಳನ್ನು ಅಭ್ಯರ್ಥಿಗಳಿಗೆ ನೀಡಬೇಕೆಂದು ಕೋರ್ಟ್ ಆದೇಶಿಸಿದ್ದರೂ ಕೆಪಿಎಸ್ಸಿ ಉತ್ತರ ಪತ್ರಿಕೆ ನೀಡುತ್ತಿಲ್ಲ. ಅಭ್ಯರ್ಥಿಗಳ ಅಂಕಗಳನ್ನು ಟ್ಯಾಂಪರ್ ಮಾಡಿದ್ದಾರೆ ಎಂದು ದೂರಿದರು.illegality-gazetted-probationary-posts-kpsc-kpcc-spokesperson-m-laxman-mysore

ಮೌಲ್ಯಮಾಪಕರ ಸಹಿಯನ್ನು ಡಿಜಿಟಲ್ ರೂಪದಲ್ಲಿ ಮಾಡಬೇಕು . ಆದರೆ ಯಾವ ಮೌಲ್ಯಮಾಪಕರ ಸಹಿ ಇಲ್ಲದಿರುವುದು ಆರೋಪಕ್ಕೆ ಪುಷ್ಠಿ ನೀಡುವಂತಿದೆ. ಜೊತೆಗೆ ಅಭ್ಯರ್ಥಿಗಳಿಗೆ ಕಳುಹಿಸಿರುವ ಅಂಕಪಟ್ಟಿಯಲ್ಲಿ ಕೆಪಿಎಸ್ಸಿ ಲೋಗೋ ಮತ್ತು ಕಾರ್ಯದರ್ಶಿಯವರ ಸಹಿ ಇಲ್ಲ. ಈ ಲೋಪಗಳಿಗೆ ನಾವು ಕೆಪಿಎಸ್ಸಿ ಅಧ್ಯಕ್ಷರನ್ನು ದೂಷಣೆ ಮಾಡುತ್ತಿಲ್ಲ. ಇದರಲ್ಲಿ ಯಾವುದೋ ಕಾಣದ ಕೈಗಳು ಕೆಲಸ ಮಾಡುತ್ತಿವೆ ಎಂದು ಎಂ. ಲಕ್ಷ್ಮಣ್ ತಿಳಿಸಿದರು.

Key words: Illegality – Gazetted Probationary -posts –KPSC-KPCC –spokesperson- M. Laxman -mysore