ಅಧಿಕಾರಕ್ಕೆ ಅಂಟಿಕೊಂಡು ಕೂರುವ ವ್ಯಕ್ತಿ ನಾನಲ್ಲ- ಸಿಎಂ ಹೆಚ್.ಡಿ ಕುಮಾರಸ್ವಾಮಿ ಹೇಳಿಕೆ…

ಬೆಂಗಳೂರು,ಜು,18,2019(www.justkannada.in): ಅಧಿಕಾರಕ್ಕೆ ಅಂಟಿಕೊಂಡು ಕೂರುವ ವ್ಯಕ್ತಿ ನಾನಲ್ಲ ಎಂದು ಸಿಎಂ ಹೆಚ್.ಡಿ ಕುಮಾರಸ್ವಾಮಿ ಹೇಳಿದ್ದಾರೆ.

ಶಾಸಕ ಶ್ರೀಮಂತ್ ಪಾಟೀಲ್ ಅವರನ್ನ ಬಲವಂತವಾಗಿ ಅಪಹರಿಸಿ ಮುಂಬೈ ಆಸ್ಪತ್ರೆಯಲ್ಲಿ ದಾಖಲು ಮಾಡಿದ್ದಾರೆ ಎಂದು ವಿಧಾನಸಭೆಯಲ್ಲಿ ಬಿಜೆಪಿ ವಿರುದ್ದ ಸಚಿವ ಡಿ.ಕೆ ಶಿವಕುಮಾರ್ ಆರೋಪಿಸಿ ಫೋಟೊ ಬಿಡುಗಡೆ ಮಾಡಿದರು. ಈ ವೇಳೆ ಸಚಿವ ಡಿ.ಕೆ ಶಿವಕುಮಾರ್ ಅವರ ಆರೋಪಕ್ಕೆ ಬಿಜೆಪಿ ಆಕ್ಷೇಪ ವ್ಯಕ್ತಪಡಿಸಿತು.

ಈ ಸಮಯದಲ್ಲಿ ಮಾತನಾಡಿದ ಸಿಎಂ ಹೆಚ್.ಡಿ ಕುಮಾರಸ್ವಾಮಿ, ವಿಧಾನಸಭೆಯಲ್ಲಿ ಸದನದಲ್ಲಿ 10ನೇ ಶೆಡ್ಯೂಲ್ ಬಗ್ಗೆ ಚರ್ಚೆ ಮಾಡಲಾಗುತ್ತಿದೆ. ಶಾಸಕರ ಮಾರಾಟದ ವಸ್ತು ಮಾಡಲು ಹೊರಟಿಲ್ಲ.  ಈ ಪೋಟೊವನ್ನ  ವಾಟ್ಸಪ್ ನಲ್ಲಿ ನಾವು ಬಿಟ್ಟಿದ್ದೀವಾ..? ಇದು ನಮ್ಮ ಗಮನಕ್ಕೆ ಬಂದಿದೆ. ಹೀಗಾಗಿ ಈ ವಿಚಾರವನ್ನ ಪ್ರಸ್ತಾಪಿಸಿದ್ದಾರೆ.  ಸದಸ್ಯರನ್ನ ರಕ್ಷಿಸುವ ಅಧಿಕಾರವನ್ನ ಉಪಯೋಗಿಸಿ.  ನಿಮ್ಮ ಅಧಿಕಾರ ಉಪಯೋಗಿಸುವ ಬಗ್ಗೆ ಗಮನಕ್ಕೆ ತಂದಿದ್ದಾರೆ ಎಂದರು.

ಹಾಗೆಯೇ ತಾನು ಅಧಿಕಾರಕ್ಕೆ ಅಂಟಿಕೊಂಡು ಕೂರುವ ವ್ಯಕ್ತಿ ನಾನಲ್ಲ ಎಂದರು.

Key words: I’m not –power-session-speak -CM HD Kumaraswamy