ನೂರು ದಿನಗಳಲ್ಲಿ ಗ್ಯಾರಂಟಿ ಜಾರಿ: ಇಡೀ ದೇಶದಲ್ಲೇ ಕರ್ನಾಟಕ ಮಾದರಿ ಎಂದು ತೋರಿಸಿದ್ದೇವೆ- ಡಿಸಿಎಂ ಡಿ.ಕೆ ಶಿವಕುಮಾರ್.

ಮೈಸೂರು,ಆಗಸ್ಟ್,30,2023(www.justkannada.in):  ಕಾಂಗ್ರೆಸ್ ಸರ್ಕಾರ  ಅಧಿಕಾರಕ್ಕೆ  ಬಂದು ನೂರು ದಿನಗಳಲ್ಲಿ ಗ್ಯಾರಂಟಿ ಯೋಜನೆ ಜಾರಿಗೊಳಿಸಿದ್ದೇವೆ. ಇಡೀ ದೇಶದಲ್ಲೇ ಕರ್ನಾಟಕ ಮಾದರಿ ಎಂದು ತೋರಿಸಿದ್ದೇವೆ ಎಂದು ಡಿಸಿಎಂ ಡಿ.ಕೆ ಶಿವಕುಮಾರ್ ತಿಳಿಸಿದರು.

ಇಂದು ಮೈಸೂರಿನಲ್ಲಿ ನಡೆದ ಗೃಹಲಕ್ಷ್ಮಿ ಯೋಜನೆ ಚಾಲನಾ ಕಾರ್ಯಕ್ರಮದಲ್ಲಿ ಮಾತನಾಡಿದ ಡಿಸಿಎಂ ಡಿ.ಕೆ ಶಿವಕುಮಾರ್,  ಇಡೀ ದೇಶದಲ್ಲಿ ಬದಲಾವಣೆಯ ಗಾಳಿ ಬೀಸಿದೆ. ಇದೇ ಭೂಮಿ ಮೇಲೆ ರಾಹುಲ್ ಗಾಂಧಿ ಭಾರತ್ ಜೋಡೋ ಯಾತ್ರೆ ಮಾಡಿದ್ದರು. ಭಾರತ್​ ಜೋಡಿ ಯಾತ್ರೆ ವೇಳೆ ಜನ ಎಲ್ಲಾ ಸಮಸ್ಯೆ ಹೇಳಿಕೊಂಡಿದ್ದರು. ನಮ್ಮ ಸರ್ಕಾರ ಬಂದು 100 ದಿನ ಆಗಿದೆ. ನಾವು ನುಡಿದಂತೆ ನಡೆದಿದ್ದೇವೆ. ನಾನು ಹಾಗೂ ಸಿದ್ದರಾಮಯ್ಯನವರು ನಮ್ಮ ನಾಡ ದೇವತೆಗೆ ನಮಿಸಿದ್ದೇವೆ. ನೂರು ದಿನಗಳಲ್ಲಿ ಕಾಂಗ್ರೆಸ್​ನ ಗ್ಯಾರಂಟಿಗಳನ್ನು ನಾವು ಅನುಷ್ಠಾನ ಮಾಡಿದ್ಧೇವೆ. ಘೋಷಣೆ ಮಾಡಿದಂತೆ ಗ್ಯಾರಂಟಿ ಯೋಜನೆ ಜಾರಿ ಮಾಡುತ್ತಿದ್ದೇವೆ ಎಂದು ಹೇಳಿದರು.

ಗೃಹಜ್ಯೋತಿ ಯೋಜನೆಯನ್ನ ಬೆಳಗಾವಿಯಲ್ಲಿ ಘೋಷಣೆ ಮಾಡಿದ್ದೆವು. ಬಳಿಕ ಅನ್ನಭಾಗ್ಯ, ಶಕ್ತಿ, ಯುವನಿಧಿ ಯೋಜನೆ ಘೋಷಣೆ ಮಾಡಿದ್ದೆವು . ಇದೀಗ ಯೋಜನೆಗಳನ್ನ ಜಾರಿಗೊಳಿಸುತ್ತಿದ್ದೇವೆ. 1.10 ಕೋಟಿ ಫಲಾನುಭವಿಗಳು ಗೃಹಲಕ್ಷ್ಮೀ ಹಣ ಪಡೆಯುತ್ತಿದ್ದಾರೆ ಎಂದು ಡಿಕೆ ಶಿವಕುಮಾರ್ ತಿಳಿಸಿದರು.

Key words: Implementation – guarantee – 100 days- DCM- DK Shivakumar.