ಇಂದು ಮಹತ್ವದ ಕಾಂಗ್ರೆಸ್ ಕಾರ್ಯಕಾರಿ ಸಮಿತಿ ಸಭೆ

ಬೆಂಗಳೂರು, ಆಗಸ್ಟ್ 28, 2022 (www.justkannada.in): ಕಾಂಗ್ರೆಸ್ ಕಾರ್ಯಕಾರಿ ಸಮಿತಿ ಸಭೆ ಇಂದು ಮಧ್ಯಾಹ್ನ ನಡೆಯಲಿದೆ.

ಸಭೆಯಲ್ಲಿ ಪಕ್ಷದ ಅಧ್ಯಕ್ಷೀಯ ಚುನಾವಣೆ ಕುರಿತು ಚರ್ಚಿಸಿ, ಚುನಾವಣೆ ದಿನಾಂಕ ನಿಗದಿಪಡಿಸುವ ಸಾಧ್ಯತೆಯಿದೆ.

ಇಂದು ಮಧ್ಯಾಹ್ನ 3-30ಕ್ಕೆ ವರ್ಚುಯಲ್ ನಲ್ಲಿ ಕಾಂಗ್ರೆಸ್ ಕಾರ್ಯಕಾರಿ ಸಮಿತಿ ಸಭೆ ನಡೆಯಲಿದೆ ಎಂದು ಮೂಲಗಳು ತಿಳಿಸಿವೆ.

ಕಾಂಗ್ರೆಸ್ ಅಧ್ಯಕ್ಷೀಯ ಚುನಾವಣೆಯಲ್ಲಿ ಸ್ಪರ್ಧಿಸಲು ರಾಹುಲ್ ಗಾಂಧಿ ಸ್ಪರ್ಧಿಸಲು ನಿರಾಸಕ್ತಿ ತೋರುತ್ತಿರುವುದರಿಂದ ಈ ಚುನಾವಣೆ ಕಾಂಗ್ರೆಸ್ ಗೆ ಪ್ರಮುಖ ಸವಾಲು ಆಗಿದೆ.

ಈ ಮಧ್ಯೆ ಕಾಂಗ್ರೆಸ್ ಪಕ್ಷ ಆಂತರಿಕ ಚುನಾವಣಾ ಪ್ರಕ್ರಿಯೆಯನ್ನು ಪೂರ್ಣಗೊಳಿಸಿದೆ. ಆಗಸ್ಟ್ 21 ಮತ್ತು ಸೆಪ್ಟೆಂಬರ್ 20 ರ ನಡುವೆ ಅಧ್ಯಕ್ಷರ ಸ್ಥಾನದ ಚುನಾವಣೆ ನಡೆಸಲಾಗುವುದು ಎಂದು ಪಕ್ಷ ಘೋಷಿಸಿದೆ.