Tuesday, September 15, 2026

BDA Apartments

ಇಬ್ಬರು ಶಾಸಕರಿಗೆ ಮಹತ್ವದ ಜವಾಬ್ದಾರಿ; ಸಿ. ನರೇಂದ್ರಗೆ ಅಂಬೇಡ್ಕರ್ ಅಭಿವೃದ್...
Home Front Page  ಇಬ್ಬರು ಶಾಸಕರಿಗೆ ಮಹತ್ವದ ಜವಾಬ್ದಾರಿ; ಸಿ. ನರೇಂದ್ರಗೆ ಅಂಬೇಡ್ಕರ್ ಅಭಿವೃದ್ಧಿ ನಿಗಮದ ಅಧ್ಯಕ್ಷ ಸ್ಥಾನ

 ಇಬ್ಬರು ಶಾಸಕರಿಗೆ ಮಹತ್ವದ ಜವಾಬ್ದಾರಿ; ಸಿ. ನರೇಂದ್ರಗೆ ಅಂಬೇಡ್ಕರ್ ಅಭಿವೃದ್ಧಿ ನಿಗಮದ ಅಧ್ಯಕ್ಷ ಸ್ಥಾನ

ಬೆಂಗಳೂರು, ಆಗಸ್ಟ್ 12,2026 (www.justkannada.in): ರಾಜ್ಯ ಸರ್ಕಾರ ಬುಧವಾರ ಮಹತ್ವದ ನೇಮಕಾತಿ ಆದೇಶಗಳನ್ನು ಹೊರಡಿಸಿದ್ದು, ವಿರಾಜಪೇಟೆ ಶಾಸಕ ಎ.ಎಸ್. ಪೊನ್ನಣ್ಣ ಹಾಗೂ ಹಳಿಯಾಳ ಶಾಸಕ ಆರ್.ವಿ. ದೇಶಪಾಂಡೆ ಅವರಿಗೆ ಪ್ರಮುಖ ಜವಾಬ್ದಾರಿಗಳನ್ನು ನೀಡಿದೆ.

ಸರ್ಕಾರದ ಅಧಿಸೂಚನೆಯಂತೆ ವಿರಾಜಪೇಟೆ ಕ್ಷೇತ್ರದ ಶಾಸಕ ಎ.ಎಸ್. ಪೊನ್ನಣ್ಣ ಅವರನ್ನು ಮುಖ್ಯಮಂತ್ರಿಯವರ ರಾಜಕೀಯ ಕಾರ್ಯದರ್ಶಿಯಾಗಿ ನೇಮಕ ಮಾಡಲಾಗಿದೆ. ಈ ಹುದ್ದೆಗೆ ಸಂಪುಟ ದರ್ಜೆ ಸಚಿವರ ಸ್ಥಾನಮಾನ ಮತ್ತು ಸೌಲಭ್ಯಗಳನ್ನು ನೀಡಲಾಗಿದೆ. ನೇಮಕಾತಿ ತಕ್ಷಣದಿಂದ ಜಾರಿಗೆ ಬರಲಿದ್ದು, ಮುಂದಿನ ಆದೇಶದವರೆಗೆ ಮುಂದುವರಿಯಲಿದೆ.ಇಬ್ಬರು ಶಾಸಕರಿಗೆ ಮಹತ್ವದ ಜವಾಬ್ದಾರಿ vidhan

ಇದೇ ವೇಳೆ ಹಳಿಯಾಳ ಕ್ಷೇತ್ರದ ಶಾಸಕ ಆರ್.ವಿ. ದೇಶಪಾಂಡೆ ಅವರನ್ನು ಆಡಳಿತ ಸುಧಾರಣಾ ಆಯೋಗದ ಅಧ್ಯಕ್ಷರಾಗಿ ನೇಮಕ ಮಾಡಲಾಗಿದೆ. ಅವರಿಗೂ ಸಂಪುಟ ದರ್ಜೆ ಸಚಿವರ ಸ್ಥಾನಮಾನ ನೀಡಲಾಗಿದೆ.

ಇನ್ನೊಂದೆಡೆ, ಮೈಸೂರು ತಾಲ್ಲೂಕಿನ ನಾಗವಾಲ ಗ್ರಾಮದ ಸಿ. ನರೇಂದ್ರ ಬಿನ್ ಹೆಚ್.ಕೆ. ಚಂದ್ರಶೇಖರ್ ಅವರನ್ನು ಡಾ. ಬಿ.ಆರ್. ಅಂಬೇಡ್ಕರ್ ಅಭಿವೃದ್ಧಿ ನಿಗಮ ನಿಯಮಿತದ ಅಧ್ಯಕ್ಷರಾಗಿ ನೇಮಕ ಮಾಡಲಾಗಿದೆ. ಈ ನೇಮಕಾತಿ ತಕ್ಷಣದಿಂದ ಜಾರಿಗೆ ಬರಲಿದ್ದು, ಮುಂದಿನ ಆದೇಶದವರೆಗೆ ಮುಂದುವರಿಯಲಿದೆ.ಸಿ. ನರೇಂದ್ರಗೆ ಅಂಬೇಡ್ಕರ್ ಅಭಿವೃದ್ಧಿ ನಿಗಮದ ಅಧ್ಯಕ್ಷ ಸ್ಥಾನ jk02_new jk02 new

ಮೂರು ನೇಮಕಾತಿಗಳಿಗೂ ಸಂಬಂಧಿಸಿದಂತೆ ಸಿಬ್ಬಂದಿ ಮತ್ತು ಆಡಳಿತ ಸುಧಾರಣಾ ಇಲಾಖೆ ಹಾಗೂ ಸಮಾಜ ಕಲ್ಯಾಣ ಇಲಾಖೆಯಿಂದ ಅಧಿಸೂಚನೆ ಹೊರಡಿಸಲಾಗಿದೆ.

Key words: Important responsibility, two MLAs,