ಇಮ್ರಾನ್ ಖಾನ್’ಗೆ ಮೂರು ವರ್ಷಗಳ ಜೈಲು ಶಿಕ್ಷೆ: ಪಾಕ್ ಸುಪ್ರಿಂಕೋರ್ಟ್ ಆದೇಶ

ಬೆಂಗಳೂರು, ಆಗಸ್ಟ್ 05, 2023 (www.justkannada.in): ಪಾಕಿಸ್ತಾನ್ ತೆಹ್ರೀಕ್-ಇ-ಇನ್ಸಾಫ್ ಅಧ್ಯಕ್ಷ ಇಮ್ರಾನ್ ಖಾನ್ ಅವರಿಗೆ ಮೂರು ವರ್ಷಗಳ ಜೈಲು ಶಿಕ್ಷೆ ವಿಧಿಸಿ ಪಾಕ್ ಸುಪ್ರಿಂಕೋರ್ಟ್‌ ಆದೇಶ ಹೊರಡಿಸಿದೆ.

ತೋಷಾಖಾನಾ ಪ್ರಕರಣದಲ್ಲಿ ಪಾಕಿಸ್ತಾನ್ ತೆಹ್ರೀಕ್-ಇ-ಇನ್ಸಾಫ್ ಅಧ್ಯಕ್ಷ ಇಮ್ರಾನ್ ಖಾನ್ ಅವರನ್ನು ದೋಷಿ ಎಂದು ಘೋಷಿಸಿದ್ದು, ಅವರಿಗೆ ಮೂರು ವರ್ಷಗಳ ಜೈಲು ಶಿಕ್ಷೆ ವಿಧಿಸಿದೆ.

ಪಾಕಿಸ್ತಾನದ ಮಾಜಿ ಪ್ರಧಾನಿ ಅಧಿಕಾರದಲ್ಲಿದ್ದಾಗ ದುಬಾರಿ ಸರ್ಕಾರಿ ಉಡುಗೊರೆಗಳನ್ನು ಮಾರಾಟ ಮಾಡುವ ಮೂಲಕ ಲಾಭ ಪಡೆದಿದ್ದಾರೆ ಎಂಬ ಆರೋಪ ಎದುರಿಸುತ್ತಿದ್ದರು.

ಭ್ರಷ್ಟಾಚಾರ ಪ್ರಕರಣದ ಮರು ವಿಚಾರಣೆ ನಡೆಸುವಂತೆ ಕೆಳ ನ್ಯಾಯಾಲಯದ ತೀರ್ಪನ್ನು ಪಾಕಿಸ್ತಾನ ಹೈಕೋರ್ಟ್ ತಳ್ಳಿಹಾಕಿದ ನಂತರ ಈ ಬೆಳವಣಿಗೆ ನಡೆದಿದೆ.