ಮೈಸೂರು,ಅಕ್ಟೋಬರ್,11,2026 (www.justkannada.in): ವಿಶ್ವ ವಿಖ್ಯಾತ ನಾಡ ಹಬ್ಬ ಮೈಸೂರು ದಸರಾಗೆ ಚಾಮುಂಡಿ ಬೆಟ್ಟದಲ್ಲಿ ವಿದ್ಯುಕ್ತ ಚಾಲನೆ ದೊರಕಿತು.
ಮೈಸೂರಿನ ಚಾಮುಂಡಿ ಬೆಟ್ಟದಲ್ಲಿ ತಾಯಿ ಚಾಮುಂಡೇಶ್ವರಿ ಉತ್ಸವ ಮೂರ್ತಿಗೆ ಪುಷ್ಪಾರ್ಚನೆ ಮಾಡುವ ಮೂಲಕ ಗವಿಮಠದ ಗವಿಸಿದ್ದೇಶ್ವರ ಶ್ರೀಗಳು ಮತ್ತು ಸಿಎಂ ಡಿಕೆ ಶಿವಕುಮಾರ್ ಮೈಸೂರು ದಸರಾಗೆ ಚಾಲನೆ ನೀಡಿದರು. 
ಚಾಮುಂಡೇಶ್ವರಿಗೆ ಪೂಜೆ ಸಲ್ಲಿಸಿ 11.50 ರಿಂದ 12.13 ರವರಗೆ ಸಲ್ಲುವ ಶುಭ ಧನುರ್ ಲಗ್ನದಲ್ಲಿ ತಾಯಿ ಚಾಮುಂಡಿಗೆ ಪುಷ್ಪಾರ್ಚನೆ ಮಾಡುವ ಮೂಲಕ 416 ನೇ ದಸರಾಕ್ಕೆ ಗವಿಮಠದ ಗವಿಸಿದ್ದೇಶ್ವರ ಶ್ರೀಗಳು ವಿಧ್ಯುಕ್ತ ಚಾಲನೆ ನೀಡಿದರು.
ಸಚಿವರಾದ ರಾಮಲಿಂಗಾರೆಡ್ಡಿ, ಯತೀಂದ್ರ ಸಿದ್ದರಾಮಯ್ಯ, ಶಿವರಾಜ ತಂಗಡಗಿ ಸೇರಿದಂತೆ ಅನೇಕ ಸಚಿವರು, ಶಾಸಕರು ಭಾಗಿಯಾಗಿದ್ದರು. ದಸರಾ ಉದ್ಘಾಟನೆ ಮಾಡಿ ನಾಡಿನ ಅಭಿವೃದ್ಧಿಗೆ ಗಣ್ಯರು ಪ್ರಾರ್ಥನೆ ಸಲ್ಲಿಸಿದರು.
Key words: Gavisiddeshwara Sri , inaugurated, Mysuru Dasara-2026, CM DK Shivakumar






