ಅಯೋಧ್ಯೆ ರಾಮಮಂದಿರ ಉದ್ಘಾಟನೆ: ಮುಂದೆ ಕಾಶಿ, ಮಥುರಾದಲ್ಲೂ ದೇವಾಲಯ ನಿರ್ಮಾಣ- ಕೆ.ಎಸ್ ಈಶ್ವರಪ್ಪ.

ಶಿವಮೊಗ್ಗ,ಜನವರಿ,22,2024(www.justkannada.in): ಅಯೋಧ್ಯೆಯಲ್ಲಿ ರಾಮ ಮಂದಿರ ಉದ್ಘಾಟನೆಯಾಗಿದ್ದು ಶ್ರೀರಾಮಲಲ್ಲಾನ ಪ್ರಾಣ ಪ್ರತಿಷ್ಠಾಪನೆಯಾಗಿದೆ. ಮುಂದೆ ಕಾಶಿ, ಮಥುರಾದಲ್ಲೂ ದೇವಾಲಯ ನಿರ್ಮಾಣವಾಗಲಿದೆ ಎಂದು ಮಾಜಿ ಸಚಿವ ಕೆ.ಎಸ್ ಈಶ್ವರಪ್ಪ ತಿಳಿಸಿದರು.

ಶ್ರೀರಾಮಲಲ್ಲಾ ಮೂರ್ತಿ ಪ್ರತಿಷ್ಠಾಪನೆ , ರಾಮಲಲ್ಲಾ ಮೂರ್ತಿ ಉದ್ಘಾಟನೆಯಾದ ಹಿನ್ನೆಲೆ ಸಾರ್ವಜನಿಕರಿಗೆ ಸಿಹಿ ಹಂಚಿ ನಂತರ ಮಾತನಾಡಿದ ಕೆ.ಎಸ್ ಈಶ್ವರಪ್ಪ, ಈ ದಿನ  ನಮ್ಮಲ್ಲರಿಗೂ ಸುದಿನ.   ಅಯೋಧ್ಯೆ ರಾಮಮಂದಿರ ಲೋಕಾರ್ಪಣೆಯಾಗಿದೆ. ಮುಂದೆ ಕಾಶಿ ಮಥುರಾದಲ್ಲಿ ದೇವಾಲಯ ನಿರ್ಮಾಣವಾಗಲಿದೆ ಎಂದರು.

ಮೋದಿ ವಿಶ್ವನಾಯಕ. ಇಲ್ಲಿ ಸಿಎಂ  ಸಿದ್ದರಾಮಯ್ಯ ಓರ್ವ ಖಳನಾಯಕನ ರೀತಿ ವರ್ತಿಸುತ್ತಿದ್ದಾರೆ.  ರಾಜ್ಯದಲ್ಲಿರುವ ಕಾಂಗ್ರೆಸ್ ಸರ್ಕಾರ ಬಿದ್ದು ಹೋಗಲಿದೆ ಎಂದು ಕೆ.ಎಸ್ ಈಶ್ವರಪ್ಪ ಭವಿಷ್ಯ ನುಡಿದರು.

Key words: Inauguration -Ayodhya -Ram Mandir – KS Eshwarappa.