ಮೈಸೂರು ಜಿಲ್ಲಾ ಪತ್ರಕರ್ತರ ಕ್ರೀಡಾಕೂಟಕ್ಕೆ ಚಾಲನೆ ನೀಡಿದ ಮೇಯರ್ ಪುಷ್ಪಲತಾ ಜಗನ್ನಾಥ್

ಮೈಸೂರು,ಜೂ,15,2019(www.justkannada.in): ಮೈಸೂರು ಜಿಲ್ಲಾ ಪತ್ರಕರ್ತರ ಸಂಘದ ವತಿಯಿಂದ ಇಂದಿನಿಂದ ಎರಡು ದಿನಗಳ ಕಾಲ ಕ್ರೀಡಾಕೂಟ ಆಯೋಜನೆ ಮಾಡಲಾಗಿದೆ.

ಮೈಸೂರು ಮಹಾನಗರ ಪಾಲಿಕೆ ಮೇಯರ್ ಪುಷ್ಪಲತಾ ಜಗನ್ನಾಥ್ ಬ್ಯಾಟಿಂಗ್ ಮಾಡುವುದರ ಮೂಲಕ ಕ್ರಿಕೆಟ್‌ ಪಂದ್ಯಾವಳಿಗೆ ಚಾಲನೆ ನೀಡಿದರು. ದೈಹಿಕ ಶಿಕ್ಷಣ ವಿಭಾಗದ ನಿರ್ದೇಶಕ ಪಿ ಕೃಷ್ಣಯ್ಯ ಶಾಟ್ ಪುಟ್ ಕ್ರೀಡಾಪಟು ಮನುಷ್, ಜಿಲ್ಲಾ ಪತ್ರಕರ್ತರ ಸಂಘದ ಅಧ್ಯಕ್ಷ ಸಿ. ಕೆ ಮಹೇಂದ್ರ, ಪ್ರದಾನ ಕಾರ್ಯದರ್ಶಿ  ಲೋಕೇಶ್ ಬಾಬು ಮತ್ತಿತರರು ಭಾಗಿಯಾಗಿದ್ದರು.

ಕ್ರೀಡಾಕೂಟದ ಮೊದಲ ದಿನ ಕ್ರಿಕೆಟ್ ಪಂದ್ಯಾವಳಿ ಆಯೋಜಿಸಲಾಗಿದ್ದು, ಎರಡನೇ ದಿನ ಪತ್ರಕರ್ತ ಕುಟುಂಬಗಳಿಗೆ ವಿವಿಧ ಕ್ರೀಡೆಗಳು ನಡೆಯಲಿದೆ.

Key words: inauguration –Mysore- District –Journalists- Sports