ರಾಮಮಂದಿರ ಉದ್ಘಾಟನೆ ಭಾರತದ ಹಬ್ಬ- ಮಾಜಿ ಸಿಎಂ ಹೆಚ್.ಡಿಕೆ.

ಬೆಂಗಳೂರು ,ಜನವರಿ,11,2024(www.justkannada.in):  ರಾಮಮಂದಿರ ಉದ್ಘಾಟನಾ ಕಾರ್ಯಕ್ರಮಕ್ಕೆ ಕಾಂಗ್ರೆಸ್ ನಾಯಕರು ಹೋಗದಿರಲು ನಿರ್ಧರಿಸಿರುವ ಕುರಿತು ಮಾಜಿ ಸಿಎಂ ಹೆಚ್.ಡಿ ಕುಮಾರಸ್ವಾಮಿ ಪ್ರತಿಕ್ರಿಯಿಸಿದ್ದಾರೆ.

ಈ ಬಗ್ಗೆ ಮಾತನಾಡಿರುವ ಮಾಜಿ ಸಿಎಂ ಹೆಚ್.ಡಿಕೆ, ಕಾಂಗ್ರೆಸ್ಸಿಗರು ರಾಮ ಮಂದಿರ ಉದ್ಘಾಟನೆಗೆ ಯಾಕೆ ಹೋಗುವುದಿಲ್ಲ ಎಂದು ಅವರೇ ಹೇಳಬೇಕು. ಅವರ ತೀರ್ಮಾನ ನನಗೂ ಸಂಬಂಧವಿಲ್ಲ ಎಂದು ತಿಳಿಸಿದ್ದಾರೆ.

ರಾಮ ಮಂದಿರ ನಿರ್ಮಾಣವಾಗಬೇಕು ಎನ್ನುವುದು ದೇಶದ ಜನರ ನಿರೀಕ್ಷೆಯಾಗಿತ್ತು, ಹಲವು ವರ್ಷಗಳ ಗೊಂದಲಕ್ಕೆ ಸುಪ್ರೀಂ ಕೋರ್ಟ್ ತೆರೆ ಎಳೆದಿದೆ. ರಾಮಮಂದಿರ ಉದ್ಘಾಟನೆ  ಎಂಬುದು ಭಾರತದ ಹಬ್ಬ ಎಂದು ಬಣ್ಣಿಸಿದ್ದಾರೆ.

Key words: Inauguration – Ram Mandir – festival of India- Former CM- H.D.Kumaraswamy