Wednesday, August 12, 2026

BDA Apartments

Home Front Page ಚುನಾವಣೆ ಫಲಿತಾಂಶ ಸಂಬಂಧಿತ ಪ್ಯಾನಲ್ ಡಿಸ್ಕರ್ಷನ್ ಪಾಲ್ಗೊಳ್ಳದಿರಲು ಎಐಸಿಸಿ ನಿರ್ಧಾರ

ಚುನಾವಣೆ ಫಲಿತಾಂಶ ಸಂಬಂಧಿತ ಪ್ಯಾನಲ್ ಡಿಸ್ಕರ್ಷನ್ ಪಾಲ್ಗೊಳ್ಳದಿರಲು ಎಐಸಿಸಿ ನಿರ್ಧಾರ

ನವದೆಹಲಿ, ಮೇ 02, 2021 (www.justkannada.in): ವಿಧಾನಸಭೆ ಚುನಾವಣೆ ಫಲಿತಾಂಶದ ದಿನ ಯಾವುದೇ ಚರ್ಚೆ ಕಾರ್ಯಕ್ರಮಗಳಲ್ಲಿ ಭಾಗವಹಿಸದಿರಲು ಕಾಂಗ್ರೆಸ್ ನಿರ್ಧಾರ ಕೈಗೊಂಡಿದೆ.

ಈ ವಿಷಯವನ್ನು ಪಕ್ಷದ ವಕ್ತಾರ ರಣದೀಪ್ ಸಿಂಗ್ ಸುರ್ಜೇವಾಲಾ ಸ್ಪಷ್ಟಪಡಿಸಿದ್ದಾರೆ. ದೇಶದಲ್ಲಿ ಕೊರೋನಾ ಪರಿಸ್ಥಿತಿ ಕೈ ಮೀರಿದೆ. ಇಂತಹ ಸಂದರ್ಭದಲ್ಲಿ ಫಲಿತಾಂಶದ ನಂತರ ಟಿವಿ ಚರ್ಚೆಗಳಲ್ಲಿ ಭಾಗಿಯಾಗುವುದಿಲ್ಲವೆಂದು ಅವರು ಹೇಳಿದ್ದಾರೆ.

ದೇಶದಲ್ಲಿ ಹಿಂದೆಂದೂ ಕಾಣದಂತಹ ಬಿಕ್ಕಟ್ಟು ಉಂಟಾಗಿದೆ. ಕೋವಿಡ್ ನಿರ್ವಹಿಸುವಲ್ಲಿ ಪ್ರಧಾನಿ ಮೋದಿ ನೇತೃತ್ವದ ಸರ್ಕಾರ ವಿಫಲವಾಗಿದೆ ಎಂದು ಅವರು ದೂರಿದ್ದಾರೆ.