ಬೆಂಗಳೂರು-ಮೈಸೂರು ಎಕ್ಸ್​ ಪ್ರೆಸ್​ ವೇಯಲ್ಲಿ ಅಪಘಾತ ಹೆಚ್ಚಳ; ವಿಶೇಷ ಸಮಿತಿ ರಚನೆ..

ಬೆಂಗಳೂರು,ಜುಲೈ,17,2023(www.justkannada.in):  ಬೆಂಗಳೂರು ಮೈಸೂರು ಎಕ್ಸ್​ಪ್ರೆಸ್​ ವೇಯಲ್ಲಿ ಅಪಘಾತಗಳು ಹೆಚ್ಚಾದ ಹಿನ್ನೆಲೆ ಈ  ಬಗ್ಗೆ ಪರಿಶೀಲನೆ ನಡೆಸಲು ರಾಷ್ಟ್ರೀಯ ಹೆದ್ದಾರಿ ಅಭಿವೃದ್ಧಿ ಪ್ರಾಧಿಕಾರ ವಿಶೇಷ ಸಮಿತಿಯೊಂದನ್ನು ರಚಿಸಿದೆ.

ರಸ್ತೆ ಸುರಕ್ಷತೆ ಸಲಹೆಗಾರ ಸುದರ್ಶನ್ ಕೆ.ಪೊಪ್ತಿ, ಎನ್​ಹೆಚ್​​​ಎಐ ಉಪ ವ್ಯವಸ್ಥಾಪಕ ಪ್ರವೀಣ್‌ ಕುಮಾ‌ರ್, ಜೈವರ್ಧನ್‌ ಸಿಂಗ್‌ ಅವರು ಸಮಿತಿಯ ಸದಸ್ಯರಾಗಿದ್ದಾರೆ. ಈ ಸಮಿತಿಯು ಜುಲೈ 20 ರೊಳಗೆ ಎಕ್ಸ್‌ಪ್ರೆಸ್‌ ಹೈವೇಗೆ ಭೇಟಿ ನೀಡಿ ಪರಿಶೀಲನೆ ನಡೆಸಲಿದೆ ಎಂಬ ಮಾಹಿತಿ ಲಭ್ಯವಾಗಿದೆ.

ಸುರಕ್ಷತೆ ಬಗ್ಗೆ ಪರಿಶೀಲನೆ ನಡೆಸಿ 10 ದಿನದೊಳಗೆ ವರದಿ ನೀಡುವಂತೆ ಪ್ರಾಧಿಕಾರದ ರಸ್ತೆ ಸುರಕ್ಷತೆ ವಿಭಾಗದ ಮುಖ್ಯ ಪ್ರಧಾನ ವ್ಯವಸ್ಥಾಪಕ ಸುನೀಲ್ ಜಿಂದಾಲ್ ಸಮಿತಿಗೆ ಸೂಚನೆ ನೀಡಿದ್ದಾರೆ. ಕಳೆದ 9 ತಿಂಗಳಿನಲ್ಲಿ ಎಕ್ಸ್​ಪ್ರೆಸ್​ ಹೈವೇಯಲ್ಲಿ 550ಕ್ಕೂ ಹೆಚ್ಚು ಅಪಘಾತಗಳು ಸಂಭವಿಸಿವೆ. ಈ ಅಪಘಾತಗಳಲ್ಲಿ ಮೃತಪಟ್ಟವರ ಬಗ್ಗೆ ಮಾಹಿತಿ ನೀಡುವಂತೆಯೂ ಪ್ರಾಧಿಕಾರ  ಸೂಚಿಸಿದೆ.

Key words: Increase – accidents -Bangalore-Mysore- Expressway- Formation – special committee.