ದೇಶದಲ್ಲಿ ಕೊರೋನಾ ಮತ್ತಷ್ಟು ಹೆಚ್ಚಳ: ಒಂದೇ ದಿನದಲ್ಲಿ 13,313 ಕೋವಿಡ್ ಪ್ರಕರಣಗಳು ಪತ್ತೆ.

0
1

ನವದೆಹಲಿ,ಜೂನ್,23,2022(www.justkannada.in): ದೇಶದಲ್ಲಿ ದಿನೇ ದಿನೇ ಕೊರೋನಾ  ಸೋಂಕಿನ ಪ್ರಕರಣ ಹೆಚ್ಚಾಗುತ್ತಿದ್ದು, ಕಳೆದ 24 ಗಂಟೆಗಳಲ್ಲಿ 13,313 ಕೋವಿಡ್ ಪ್ರಕರಣಗಳು ಪತ್ತೆಯಾಗಿದೆ.

ಈ ಕುರಿತು  ಕೇಂದ್ರ ಆರೋಗ್ಯ ಸಚಿವಾಲಯ ಮಾಹಿತಿ  ನೀಡಿದ್ದು, ಕಳೆದ 24 ಗಂಟೆಗಳಲ್ಲಿ ಕೋವಿಡ್ ಗೆ 38 ಮಂದಿ ಮೃತಪಟ್ಟಿದ್ದಾರೆ.ಈ ಮೂಲಕ  ಕೋವಿಡ್​ನಿಂದ ಸಾವನ್ನಪ್ಪಿರುವವರ ಸಂಖ್ಯೆ 5,24,941ಕ್ಕೆ ಹೆಚ್ಚಳವಾಗಿದೆ. ಕಳೆದ 24 ಗಂಟೆಗಳಲ್ಲಿ 10,972ಮಂದಿ ಗುಣಮುಖರಾಗಿರುವುದರೊಂದಿಗೆ ಒಟ್ಟು ಚೇತರಿಸಿಕೊಂಡವರ ಸಂಖ್ಯೆ 4,27,36,027ಕ್ಕೆ ಏರಿಕೆಯಾಗಿದೆ.

ಸಕ್ರಿಯ ಪ್ರಕರಣಗಳು 83,990 ಇದ್ದು ಪಾಸಿಟಿವಿಟಿ ದರ ಶೇ.2.03ರಷ್ಟಿದೆ. ದೇಶದಲ್ಲಿ ಒಂದೇ ದಿನದಲ್ಲಿ 14,91,941 ಮಂದಿ ಕೊರೊನಾ ಲಸಿಕೆ ನೀಡಲಾಗಿದೆ. ಇದುವರೆಗೂ ಒಟ್ಟು 1,96,62,11,973 ಮಂದಿಗೆ ಕೊರೊನಾ ಲಸಿಕೆ ಹಾಕಲಾಗಿದೆ.

Key words: increase – corona – country- 13,313 cases -Covid