ರೈತರಿಗೆ ಶೂನ್ಯ ಬಡ್ಡಿದರದ ಸಾಲ ಮಿತಿ ಏರಿಕೆ:  ಅನುಗ್ರಹ ಯೋಜನೆ ಮರು ಜಾರಿ

ಬೆಂಗಳೂರು,ಜುಲೈ,7,2023(www.justkannada.in): ರಾಜ್ಯ ಬಜೆಟ್ ನಲ್ಲಿ ರೈತರಿಗೆ ಸಿಎಂ ಸಿದ್ಧರಾಮಯ್ಯ ಗುಡ್ ನ್ಯೂಸ್ ನೀಡಿದ್ದು ರೈತರಿಗೆ ಶೂನ್ಯ ಬಡ್ಡಿದರದ ಸಾಲ ಮಿತಿಯನ್ನ 3 ಲಕ್ಷದಿಂದ 5 ಲಕ್ಷಕ್ಕೆ ಏರಿಕೆ ಮಾಡುವುದಾಗಿ ಘೋಷಿಸಿದ್ದಾರೆ.

ಇಂದು ವಿಧಾನಸಭೆಯಲ್ಲಿ ಬಜೆಟ್ ಮಂಡಿಸುತ್ತಿರುವ ಸಿಎಂ ಸಿದ್ಧರಾಮಯ್ಯ, ರೈತರಿಗೆ ಮಧ್ಯಮಾವಧಿ, ದೀರ್ಘಾವಧಿ ಸಾಲ ಮಿತಿಯನ್ನ 10 ಲಕ್ಷದಿಂದ 15 ಲಕ್ಷಕ್ಕೆ ಏರಿಸಲಾಗಿದ್ದು, ಗುಡ್ಡಗಾಡು ಪ್ರದೇಶದ ರೈತರಗೆ ಪಿಕ್ ವ್ಯಾನ್ ಖರೀದಿಗೆ 7 ಲಕ್ಷದವರೆಗೆ ಸಾಲ ನೀಡಲಾಗುವುದು. ತೆಂಗು, ಅಡಕೆ, ದ್ರಾಕ್ಷಿ ದಾಳಿಂಬೆ ಬೆಳೆ ಸಂಸ್ಕರಣೆಗೆ ಕ್ರಮ ಕೈಗೊಳ್ಳಲಾಗುತ್ತದೆ ಎಂದಿದ್ದಾರೆ.

ಹಾಗೆಯೇ  75 ಕೋಟಿ ರೂ. ವೆಚ್ಚದಲ್ಲಿ ರೇಷ್ಮೆ ಮಾರುಕಟ್ಟೆ ಸ್ಥಾಪನೆ. ಅನುಗ್ರಹ ಯೋಜನೆ ಮರು ಜಾರಿ ಮಾಡಿ ‘ಕುರಿ ಮೇಕೆ ಮೃತಪಟ್ಟರೆ 5 ಸಾವಿರ ರೂ. ಪರಿಹಾರ ನೀಡಲಾಗುವುದು. ಜಾನುವಾರುಗಳ(ಹಸು, ಎಮ್ಮೆ) ಆಕಸ್ಮಿಕ ಸಾವುಗಳಿಗೆ 10 ಸಾವಿರ ಪರಿಹಾರ. ಕುರಿ, ಮೇಕೆ ಸಾವನ್ನಪ್ಪಿದರೆ 5 ಸಾವಿರ ಪರಿಹಾರ ನೀಡಲಾಗುತ್ತದೆ ಎಂದಿದ್ದಾರೆ.

ಕೃಷಿ ನವೋದ್ಯಮಕ್ಕೆ 10 ಕೋಟಿ. 100 ಸಹಕಾರಿ ಸಂಸ್ಥೆಗಳಿಗೆ 20 ಲಕ್ಷ ರೂಪಾಯಿ ಸಾಲ ಸೌಲಭ್ಯ. ರೈತರ ಉತ್ಪನ್ನಗಳಿಗೆ ಏಕೀಕೃತ ಬ್ರ್ಯಾಂಡಿಂಗ್‌ ಗೆ 10 ಕೋಟಿ ಅನುದಾನ ನೀಡಲಾಗುತ್ತದೆ ಎಂದಿದ್ದಾರೆ.

Key words: Increase – zero -interest -loan limit – farmers- CM Siddaramaiah-budget