ಧ್ವಜಸ್ತಂಭ ನಿಲ್ಲಿಸುವ ವೇಳೆ ದುರಂತ: ವಿದ್ಯುತ್ ಸ್ಪರ್ಶಿಸಿ ಬಾಲಕ ಸಾವು.

ತುಮಕೂರು,ಆಗಸ್ಟ್,15,2021(www.justkannada.in): ಧ್ವಜಸ್ತಂಭ ನಿಲ್ಲಿಸುವ ವೇಳ ವಿದ್ಯುತ್ ಸ್ಪರ್ಶಿಸಿ ಬಾಲಕ ಸಾವನ್ನಪ್ಪಿರುವ ಘಟನೆ ತುಮಕೂರು ತಾಲ್ಲೂಕಿನಲ್ಲಿ ನಡೆದಿದೆ.

ತಾಲ್ಲೂಕಿನ ಕರೀಕೆರೆ ಗ್ರಾಮದ ಸರ್ಕಾರಿ ಶಾಲೆಯಲ್ಲಿ ನಡೆದಿದೆ. ಚಂದನ್(16) ಮೃತಪಟ್ಟ ಬಾಲಕ. ಇಂದು 75ನೇ ಸ್ವಾತಂತ್ರ್ಯೋತ್ಸವ ಹಿನ್ನೆಲೆ ಧ್ವಜಾರೋಹಣಕ್ಕಾಗಿ ಧ್ವಜಸ್ತಂಭ ನಿಲ್ಲಿಸಲಾಗುತ್ತಿತ್ತು. ಈ ವೇಳೆ ಶಾರ್ಟ್ ಸರ್ಕ್ಯೂಟ್ ನಿಂದಾಗಿ ವಿದ್ಯುತ್ ಸ್ಪರ್ಶಿಸಿ ಬಾಲಕ ಮೃತಪಟ್ಟಿದ್ದಾನೆ ಎನ್ನಲಾಗಿದೆ.

ಇನ್ನು ಘಟನೆಯಲ್ಲಿ ಶಶಾಂಕ್ ಮತ್ತು ಇನ್ನೊಬ್ಬ ಬಾಲಕನಿಗೆ ಗಾಯಗಳಾಗಿದ್ದು ಇಬ್ಬರನ್ನು ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಈ  ಕುರಿತು ಕೋರಾ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Key words: independence day-flag pole-  death – boy – electricity-tumkur