ಭಾರತ –ಚೀನಾ ಗಡಿಯಲ್ಲಿ ಮತ್ತೆ ಸಂಘರ್ಷ: ಮೂವರು ಯೋಧರು ಹುತಾತ್ಮ…

ನವದೆಹಲಿ,ಜೂ,16,2020(www.justkannada.in):  ಭಾರತ-ಚೀನಾ ಸೈನಿಕರ ನಡುವೆ ಘರ್ಷಣೆ ಸಂಭವಿಸಿದ್ದು, ಈ ವೇಳೆ ಭಾರತದ ಮೂವರು ಯೋಧರು ಹುತಾತ್ಮರಾಗಿದ್ದಾರೆ.

ಭಾರತ -ಚೀನಾ ಗಡಿ ಗಲ್ವಾನ್ ವ್ಯಾಲಿಯಲ್ಲಿ ಭಾರತ ಮತ್ತು ಚೀನಾ ನಡುವೆ ಸಂಘರ್ಷ ಉಂಟಾಗಿದ್ದು ಚೀನಿ ಸೈನಿಕರ ದಾಳಿಯಿಂದಾಗಿ ಭಾರತೀಯ ಸೇನೆಯ ಓರ್ವ ಸೈನ್ಯಾಧಿಕಾರಿ ಹಾಗೂ ಇಬ್ಬರು  ಯೋಧರು ಹುತಾತ್ಮರಾಗಿದ್ದಾರೆ.india-china-border-conflict-three-soldier-martyrs

ನಿನ್ನೆ ತಡರಾತ್ರಿ ಈ ಘರ್ಷಣೆ ನಡೆದಿದ್ದು ಭಾರತೀಯ ಸೇನೆಯ ಓರ್ವ ಸೈನ್ಯಾಧಿಕಾರಿ ಹಾಗೂ ಇಬ್ಬರು ಯೋಧರು ಹುತಾತ್ಮರಾಗಿದ್ದಾರೆ. ಈ ಕುರಿತು ಭಾರತೀಯ ಸೇನೆ ಅಧಿಕೃತ ಮಾಹಿತಿ ನೀಡಿದೆ.  ಶಾಂತಿ ಮಾತುಕತೆ ಬಳಿಕವೂ ಚೀನಿ ಸೈನಿಕರು ಉದ್ಧಟತನ ಮೆರೆದಿರುವುದು ಭಾರೀ ಆಕ್ರೋಶಕ್ಕೆ ಕಾರಣವಾಗಿದೆ. ಇನ್ನು ಈ ಸಂಬಂಧ ಭಾರತೀಯ ಸೇನೆ ಮಧ್ಯಾಹ್ನ 2 ಗಂಟೆಗೆ ತುರ್ತು ಸುದ್ಧಿಗೋಷ್ಠಿ ನಡೆಸಲಿದೆ.

Key words: India-China- border -conflict -three soldier -martyrs.