ದೇಶದಲ್ಲಿ ಒಂದೇ ದಿನ ದಾಖಲೆ ಪ್ರಮಾಣದ ಕೊರೋನಾ ಸೋಂಕು ಪ್ರಕರಣ ಪತ್ತೆ…

ನವದೆಹಲಿ,ಜು,16,2020(www.justkannada.in):  ದೇಶದಲ್ಲಿ ಮಹಾಮಾರಿ ಕೊರೋನಾ ಸೋಂಕಿತರ ಪ್ರಮಾಣ ದಿನೇ ದಿನೇ ಹೆಚ್ಚುತ್ತಿದ್ದು, ದೇಶದಲ್ಲಿ ಒಂದೇ ದಿನದಲ್ಲಿ 32 ಸಾವಿರಕ್ಕೂ ಹೆಚ್ಚು ಕೊರೋನಾ ಸೋಂಕು ಪ್ರಕರಣ ಪತ್ತೆಯಾಗಿದೆ.jk-logo-justkannada-logo

ಕಳೆದ 24 ಗಂಟೆಗಳಲ್ಲಿ 32,695 ಮಂದಿಗೆ ಕೊರೋನಾ ಸೋಂಕು ತಗುಲಿದ್ದು , ಈ ಮೂಲಕ ಒಟ್ಟು ಸೋಂಕಿತರ ಸಂಖ್ಯೆ 9,70,169ಕ್ಕೆ ತಲುಪಿದೆ. ಒಂದೇ ದಿನದಲ್ಲಿ ಕೊರೋನಾಗೆ 606 ಮಂದಿ ಬಲಿಯಾಗಿದ್ದು, ಈವರೆಗೆ ಕೊರೋನಾಗೆ ಮೃತಪಟ್ಟವರ ಸಂಖ್ಯೆ 24,915ಕ್ಕೆ ಏರಿಕೆಯಾಗಿದೆ.india-corona-case-found-record

9,70,169 ಮಂದಿ ಸೋಂಕಿತರ ಪೈಕಿ 6,12,815 ಮಂದಿ ಕೊರೋನಾದಿಂದ ಗುಣಮುಖರಾಗಿ ಡಿಸ್ಚಾರ್ಜ್ ಆಗಿದ್ದಾರೆ. ಪ್ರಸ್ತುತ ದೇಶದಲ್ಲಿನ್ನೂ 3,31,146 ಮಂದಿ ಸೋಂಕಿನಿಂದ ಬಳಲುತ್ತಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ.

Key words: india- corona- case- found-record