Sunday, August 23, 2026

BDA Apartments

Home Front Page ಕೊರೊನಾ ಅರ್ಭಟ: ಚೇತರಿಕೆ ಹಾದಿಯಲ್ಲಿ ಭಾರತ?!

ಕೊರೊನಾ ಅರ್ಭಟ: ಚೇತರಿಕೆ ಹಾದಿಯಲ್ಲಿ ಭಾರತ?!

ನವದೆಹಲಿ, ಮೇ 11, 2020 (www.justkannada.in): ಭಾರತದಲ್ಲಿ ಕಳೆದ 24 ಗಂಟೆಗಳಲ್ಲಿ 10 ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಲ್ಲಿ ಯಾವುದೇ ಹೊಸ ಕೊರೊನಾ ಪ್ರಕರಣಗಳು ಪತ್ತೆಯಾಗಿಲ್ಲ.

ಈ ಕುರಿತು ಕೇಂದ್ರ ಆರೋಗ್ಯ ಸಚಿವ ಹರ್ಷವರ್ಧನ್ ಮಾಹಿತಿ ನೀಡಿದ್ದಾರೆ. ಆರೋಗ್ಯ ಸಚಿವಾಲಯದ ಮಾಹಿತಿ ಪ್ರಕಾರ, ಭಾರತದಲ್ಲಿ ಕಳೆದ 24 ಗಂಟೆಗಳಲ್ಲಿ 1.511 ಕೊರೊನಾ ರೋಗಿಗಳು ಚೇತರಿಸಿಕೊಂಡಿದ್ದಾರೆ. ಇದು ಒಂದೇ ದಿನದಲ್ಲಿ ದಾಖಲಾದ ಅತಿ ಹೆಚ್ಚು ಚೇತರಿಕೆಯಾಗಿದೆ.

ಕಳೆದ 24 ಗಂಟೆಗಳಲ್ಲಿ ಅಂಡಮಾನ್ ಮತ್ತು ನಿಕೋಬಾರ್ ದ್ವೀಪಗಳು, ಅರುಣಾಚಲ ಪ್ರದೇಶ, ದಾದ್ರಾ ಮತ್ತು ನಗರ ಹವೇಲಿ, ಗೋವಾ, ಜಮ್ಮು ಮತ್ತು ಕಾಶ್ಮೀರ, ಲಡಾಖ್, ಮಣಿಪುರ, ಒಡಿಶಾ, ಮಿಜೋರಾಂ ಹಾಗೂ ಪುದುಚೇರಿಯಲ್ಲಿ ಯಾವುದೇ ಹೊಸ ಕೋವಿಡ್ 19 ಪ್ರಕರಣಗಳು ವರದಿಯಾಗಿಲ್ಲ.