Sunday, September 13, 2026

BDA Apartments

ನಾಳೆ ಬೆಂಗಳೂರಲ್ಲಿ ಭಾರತ-ದಕ್ಷಿಣ ಆಫ್ರಿಕಾ ನಿರ್ಣಾಯಕ ಟಿ-20 ಪಂದ್ಯ BDA JK_Adv BDA Adv
Home Front Page ನಾಳೆ ಬೆಂಗಳೂರಲ್ಲಿ ಭಾರತ-ದಕ್ಷಿಣ ಆಫ್ರಿಕಾ ನಿರ್ಣಾಯಕ ಟಿ-20 ಪಂದ್ಯ

ನಾಳೆ ಬೆಂಗಳೂರಲ್ಲಿ ಭಾರತ-ದಕ್ಷಿಣ ಆಫ್ರಿಕಾ ನಿರ್ಣಾಯಕ ಟಿ-20 ಪಂದ್ಯ

ಬೆಂಗಳೂರು, ಜೂನ್ 18, 2022 (www.justkannada.in): ನಾಳೆ ಭಾನುವಾರ (ಜೂ.19)ರಂದು ಬೆಂಗಳೂರಿನಲ್ಲಿ ಭಾರತ ಮತ್ತು ದಕ್ಷಿಣ ಆಫ್ರಿಕಾ ನಡುವೆ 5ನೇ ಹಾಗೂ ನಿರ್ಣಾಯಕ ಪಂದ್ಯ ನಡೆಯಲಿದೆ.

5 ಪಂದ್ಯಗಳ ಟಿ20 ಸರಣಿ 2-2ರಲ್ಲಿ ಸಮಬಲಗೊಂಡಿದೆ. ಹೀಗಾಗಿ ಭಾನುವಾರ ಬೆಂಗಳೂರಿನಲ್ಲಿ ಭಾರತ ಮತ್ತು ದಕ್ಷಿಣ ಆಫ್ರಿಕಾ ನಡುವೆ 5ನೇ ಹಾಗೂ ನಿರ್ಣಾಯಕವಾಗಿದೆ.

ಟಿ20 ಸರಣಿ 2-2ರಲ್ಲಿ ಸಮಬಲಗೊಂಡಿದೆ. ದಕ್ಷಿಣ ಆಫ್ರಿಕಾ ಸರಣಿಯ ಆರಂಭಿಕ ಎರಡೂ ಪಂದ್ಯಗಳನ್ನು ಗೆದ್ದರೆ, ನಂತರದ ಎರಡು ಪಂದ್ಯಗಳಲ್ಲಿ ಭಾರತ ಜಯ ಸಾಧಿಸಿ ಸೇಡು ತೀರಿಸಿಕೊಂಡಿತು. ಹೀಗಾಗಿ ಅಂತಿಮ ಪಂದ್ಯ ಕುತೂಹಲಕ್ಕೆ ಕಾರಣವಾಗಿದೆ.

ಭಾರತ ಮತ್ತು ದಕ್ಷಿಣ ಆಫ್ರಿಕಾ ನಡುವಿನ 5ನೇ ಟಿ20 ಪಂದ್ಯ ಸಂಜೆ 7 ಗಂಟೆಗೆ ಆರಂಭವಾಗಲಿದೆ. ಈ ಪಂದ್ಯದ ಟಾಸ್ ಸಂಜೆ 6:30ಕ್ಕೆ ನಡೆಯಲಿದೆ.