ಇಂಗ್ಲೆಂಡ್ ವಿರುದ್ಧದ ಟೆಸ್ಟ್ ಸರಣಿಗೆ ಭಾರತ ತಂಡ ಪ್ರಕಟ: ಮೂವರು ಕನ್ನಡಿಗರಿಗೆ ಸ್ಥಾನ

ಮುಂಬೈ,ಮೇ,24,2025 (www.justkannada.in): ಇಂಗ್ಲೆಂಡ್ ವಿರುದ್ಧದ ಟೆಸ್ಟ್ ಸರಣಿಗಾಗಿ ಭಾರತ ತಂಡವನ್ನು ಪ್ರಕಟಿಸಲಾಗಿದ್ದು, ಇಬ್ಬರು ಕನ್ನಡಿಗರಿಗೆ ಸ್ಥಾನ ದೊರೆತಿದೆ.

18 ಸದಸ್ಯರ  ಟೆಸ್ಟ್ ತಂಡದ ನಾಯಕರಾಗಿ ಯುವ ಆಟಗಾರ ಶುಭ್​ಮನ್​ ಗಿಲ್, ಉಪನಾಯಕರಾಗಿ ರಿಷಬ್ ಪಂತ್ ಆಯ್ಕೆಯಾಗಿದ್ದಾರೆ.  ಟೆಸ್ಟ್ ತಂಡದಲ್ಲಿ ಕನ್ನಡಿಗರಾದ ಕೆ.ಎಲ್ ರಾಹುಲ್ , ಕರುಣ್ ನಾಯರ್, ಪ್ರಸಿದ್ ಕೃಷ್ಣಗೆ ಸ್ಥಾನ ಲಭಿಸಿದೆ.

ತಂಡದಲ್ಲಿ ಯಶಸ್ವಿ ಜೈಸ್ವಾಲ್, ಅಭಿಮನ್ಯು ಈಶ್ವರನ್ ಹಾಗೂ ಸಾಯಿ ಸುದರ್ಶನ್ ಕಾಣಿಸಿಕೊಂಡಿದ್ದಾರೆ.  ಆಲ್​ರೌಂಡರ್​ಗಳಾಗಿ ನಿತೀಶ್ ಕುಮಾರ್ ರೆಡ್ಡಿ, ವಾಷಿಂಗ್ಟನ್ ಸುಂದರ್, ರವೀಂದ್ರ ಜಡೇಜಾ, ಶಾರ್ದೂಲ್ ಠಾಕೂರ್​ ಟೀಮ್ ಇಂಡಿಯಾದಲ್ಲಿ ಸ್ಥಾನ ಪಡೆದಿದ್ದಾರೆ. ಇನ್ನು ವೇಗದ ಬೌಲರ್​ ಗಳಾಗಿ ಜಸ್​ಪ್ರೀತ್ ಬುಮ್ರಾ, ಮೊಹಮ್ಮದ್ ಸಿರಾಜ್, ಪ್ರಸಿದ್ಧ್ ಕೃಷ್ಣ, ಆಕಾಶ್ ದೀಪ್ ಹಾಗೂ ಅರ್ಷದೀಪ್ ಸಿಂಗ್ ಆಯ್ಕೆಯಾಗಿದ್ದಾರೆ.

ಇಂಗ್ಲೆಂಡ್ ವಿರುದ್ಧದ ಟೆಸ್ಟ್ ಸರಣಿಗೆ ಭಾರತ ತಂಡ ಈ ಕೆಳಗಿನಂತಿದೆ

ಶುಭ್​ಮನ್ ಗಿಲ್ (ನಾಯಕ), ರಿಷಭ್ ಪಂತ್ (ಉಪನಾಯಕ), ಯಶಸ್ವಿ ಜೈಸ್ವಾಲ್, ಕೆಎಲ್ ರಾಹುಲ್, ಸಾಯಿ ಸುದರ್ಶನ್, ಅಭಿಮನ್ಯು ಈಶ್ವರನ್, ಕರುಣ್ ನಾಯರ್, ನಿತೀಶ್ ಕುಮಾರ್ ರೆಡ್ಡಿ, ರವೀಂದ್ರ ಜಡೇಜಾ, ಧ್ರುವ್ ಜುರೇಲ್, ವಾಷಿಂಗ್ಟನ್ ಸುಂದರ್, ಶಾರ್ದೂಲ್ ಠಾಕೂರ್, ಜಸ್​ಪ್ರೀತ್ ಬುಮ್ರಾ, ಮೊಹಮ್ಮದ್ ಸಿರಾಜ್, ಪ್ರಸಿದ್ಧ್ ಕೃಷ್ಣ, ಆಕಾಶ್ ದೀಪ್, ಕುಲ್ದೀಪ್ ಯಾದವ್, ಅರ್ಷದೀಪ್ ಸಿಂಗ್.

ಭಾರತ ಮತ್ತು ಇಂಗ್ಲೆಂಡ್ ಟೆಸ್ಟ್ ಸರಣಿ ವೇಳಾಪಟ್ಟಿ ಹೀಗಿದೆ ನೋಡಿ

ಮೊದಲ ಟೆಸ್ಟ್: 20-24 ಜೂನ್, 2025

2ನೇ ಟೆಸ್ಟ್: ಜುಲೈ 2-6, 2025

3ನೇ ಟೆಸ್ಟ್: ಜುಲೈ 10-14, 2025

4ನೇ ಟೆಸ್ಟ್: 23-27 ಜುಲೈ, 2025

5ನೇ ಟೆಸ್ಟ್: 31 ಜುಲೈ-4 ಆಗಸ್ಟ್, 2025

Key words: India squad announced, England, Test series