ನವದೆಹಲಿ,ಅಕ್ಟೋಬರ್,12,2026 (www.justkannada.in): ಎಸ್ ಐಆರ್ ರದ್ದತಿ ಮತ್ತು ಕೇಂದ್ರ ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ರಾಜೀನಾಮೆಗೆ ಮನವಿ ಮಾಡಿ ಇಂಡಿಯಾ ಒಕ್ಕೂಟದ ನಾಯಕರು ದೆಹಲಿಯಲ್ಲಿ ಸುಪ್ರೀಂಕೋರ್ಟ್ ವರೆಗೆ ಬೃಹತ್ ಪ್ರತಿಭಟನಾ ಪಾದಯಾತ್ರೆ ನಡೆಸುತ್ತಿದ್ದಾರೆ.
ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ನೇತೃತ್ವದಲ್ಲಿ, ಅಖಿಲೇಶ್ ಯಾದವ್, ತೇಜಸ್ವಿ ಯಾದವ್ ಸೇರಿದಂತೆ ಪ್ರಮುಖ ವಿಪಕ್ಷ ನಾಯಕರು, ಕಾರ್ಯಕರ್ತರು, ವಕೀಲರು ಈ ಪಾದಯಾತ್ರೆಯಲ್ಲಿ ಭಾಗವಹಿಸಿದ್ದಾರೆ ಎನ್ನಲಾಗಿದೆ.
ಕಾರ್ಯಕರ್ತರ ಜೊತೆ ಪ್ರಿಯಾಂಕ, ರಾಹುಲ್ ಗಾಂಧಿ ಹೆಜ್ಜೆ ಹಾಕುತ್ತಿದ್ದು ಜ್ಞಾನೇಶ್ ಕುಮಾರ್ ರಾಜೀನಾಮೆಗೆ ಪಟ್ಟು ಹಿಡಿದಿದ್ದಾರೆ. ಇನ್ನು ಜ್ಞಾನೇಶ್ ಕುಮಾರ್ ವಿರುದ್ದ ಸುಪ್ರೀಂಕೋರ್ಟ್ ಗೆ ರಾಹುಲ್ ಗಾಂಧಿ ಅವರ ಪರ ವಕೀಲರು ಅರ್ಜಿ ಸಲ್ಲಿಸಿದ್ದಾರೆ.






