ಸಿಡ್ನಿ,ಅಕ್ಟೋಬರ್, 25,2025 (www.justkannada.in): ಸಿಡ್ನಿಯಲ್ಲಿ ನಡೆದ ಭಾರತ ಹಾಗೂ ಆಸ್ಟ್ರೇಲಿಯಾ ನಡುವಿನ ಮೂರನೇ ಏಕದಿನ ಪಂದ್ಯದಲ್ಲಿ ರೋಹಿತ್ ಶರ್ಮಾ ಅವರ ಭರ್ಜರಿ ಶತಕ ಹಾಗೂ ವಿರಾಟ್ ಕೊಹ್ಲಿಯ ಅರ್ಧ ಶತಕದ ನೆರವಿನಿಂದ ಟೀಂ ಇಂಡಿಯಾ 9 ವಿಕೆಟ್ ಗಳ ಜಯ ಸಾಧಿಸಿ ಕ್ಲೀನ್ ಸ್ವೀಪ್ ನಿಂದ ಪಾರಾಗಿದೆ.
ಆಸ್ಟ್ರೇಲಿಯಾ ಪ್ರವಾಸದಲ್ಲಿ ಟೀಮ್ ಇಂಡಿಯಾ ಈ ಮೊದಲು ಆಡಿದ ಎರಡೂ ಪಂದ್ಯಗಳಲ್ಲಿ ಸೋಲು ಕಂಡಿದ್ದು, ಮೂರನೇ ಪಂದ್ಯದಲ್ಲಿ ಗೆಲುವು ಸಾಧಿಸಿತು. ಟಾಸ್ ಗೆದ್ದು ಬ್ಯಾಟಿಂಗ್ ಆರಂಭಿಸಿದ ಆಸ್ಟ್ರೇಲಿಯಾ 236 ರನ್ ಗಳಿಗೆ ಆಲ್ ಔಟ್ ಆಯಿತು.
ಆಸ್ಟ್ರೇಲಿಯಾ ನೀಡಿದ್ದ 237 ರನ್‌ಗಳ ಗುರಿ ಬೆನ್ನತ್ತಿದ ಟೀಮ್ ಇಂಡಿಯಾಪರ ನಾಯಕ ಶುಭಮನ್ ಗಿಲ್ ಜೊತೆಗೆ ಮಾಜಿ ನಾಯಕ ರೋಹಿತ್ ಶರ್ಮಾ ಇನಿಂಗ್ಸ್ ಆರಂಭಿಸಿದರು. ನಾಯಕ ಶುಬ್ಮನ್ ಗಿಲ್ 24 ರನ್ ಗಳಿಸಿ ಔಟಾದ ಬಳಿಕ ಸ್ಕ್ರೀಜ್ ಗೆ ಬಂದ ವಿರಾಟ್ ಕೊಹ್ಲಿ ರೋಹಿತ್ ಜೊತೆ ಭರ್ಜರಿಯಾಟ ಆಡಿದರು. ರೋಹಿತ್ ಶರ್ಮಾ121 ರನ್ ಗಳಿಸುವ ಮೂಲಕ ಭರ್ಜರಿ ಶತಕ ಗಳಿಸಿದರೆ ವಿರಾಟ್ ಕೊಹ್ಲಿ 74 ರನ್ ಬಾರಿಸಿ ಭಾರತಕ್ಕೆ ಜಯ ತಂದುಕೊಟ್ಟರು. ಅಂತಿಮವಾಗಿ ಭಾರತ 38.3 ಓವರ್‌ಗಳಲ್ಲಿ 1 ವಿಕೆಟ್ ನಷ್ಟಕ್ಕೆ 237 ರನ್ ಸೇರಿಸಿ ಜಯ ಸಾಧಿಸಿತು.
Key words: Sydney, Team India, won, Against, Australia







