Saturday, September 12, 2026

BDA Apartments

ಕನ್ನಡ ಭಾಷೆ, ಸಂಸ್ಕೃತಿಗೆ ಭಾರತದಾತ್ಯಂತ ಗೌರವ: ಪ್ರಧಾನಿ ಮೋದಿ BDA JK_Adv BDA Adv
Home Front Page ಕನ್ನಡ ಭಾಷೆ, ಸಂಸ್ಕೃತಿಗೆ ಭಾರತದಾತ್ಯಂತ ಗೌರವ: ಪ್ರಧಾನಿ ಮೋದಿ

ಕನ್ನಡ ಭಾಷೆ, ಸಂಸ್ಕೃತಿಗೆ ಭಾರತದಾತ್ಯಂತ ಗೌರವ: ಪ್ರಧಾನಿ ಮೋದಿ

ಮೈಸೂರು, ಅಕ್ಟೋಬರ್ 9, 2022 (www.justkannada.in): ಕನ್ನಡ ಭಾಷೆ ಸಂಸ್ಕೃತಿಯನ್ನು ಭಾರತದಾತ್ಯಂತ ಗೌರವಿಸಲಾಗುತ್ತದೆ ಎಂದು ಪ್ರಧಾನಿ ಮೋದಿ ಹೇಳಿದ್ದಾರೆ.

ಅಹ್ಮದಾಬಾದ್ ನಲ್ಲಿ ಕನ್ನಡ ಸಂಘದ 75 ವಾರ್ಷಿಕೋತ್ಸವದಲ್ಲಿ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಭಾಗಿಯಾಗಿದ್ದ ಬಗ್ಗೆ ಮೋದಿ ಪ್ರತಿಕ್ರಿಯೆ ನೀಡಿದ್ದಾರೆ.

ಗುಜರಾತ್ ನಲ್ಲಿ ಕನ್ನಡಿಗರು ಬೆರೆತು ವ್ಯಾಪಾರ ವಹಿವಾಟು ನಡೆಸಿ ಗುಜರಾತ್ ರಾಜ್ಯದ ಏಳಿಗೆಗೆ ಕೊಡುಗೆ ನೀಡಿದ್ದಾರೆ ಎಂದು ಪ್ರಹ್ಲಾದ್ ಜೋಶಿ ಅವರು ಸ್ಮರಿಸಿದ್ದಾರೆ.

ನ್ನಡ ಸಂಘದ 75ನೇ ವರ್ಷದ ವಾರ್ಷಿಕೋತ್ಸವ ಸಂಭ್ರಮದಲ್ಲಿ ಅತ್ಯಂತ ಸಂತಸದಿಂದ ಪಾಲ್ಗೊಂಡು ಗುಜರಾತ್ ಕನ್ನಡಿಗರೊಂದಿಗೆ ಎರಡು ರಾಜ್ಯಗಳು ಹೊಂದಿರುವ ವಿಶೇಷ ಬಾಂಧವ್ಯದ ಕುರಿತು ವಿಚಾರಗಳನ್ನು ಹಂಚಿಕೊಂಡಿದ್ದಾರೆ.

ಈ ಬಗ್ಗೆ ಪ್ರಹ್ಲಾದ ಜೋಶಿ ಟ್ವೀಟ್ ಮಾಡಿದ್ದು, ಪ್ರಧಾನಿ ನರೇಂದ್ರ ಮೋದಿ ಪ್ರತಿಕ್ರಿಯಿಸಿ, ಏಕ ಭಾರತ ಶ್ರೇಷ್ಠ ಭಾರತ, ಇಂತಹ ಸಾಂಸ್ಕೃತಿಕ ವಿನಿಮಯಗಳು ಉತ್ತೇಜನಕಾರಿಯಾಗಿವೆ ಎಂದಿದ್ದಾರೆ.