ರಾಜಕೀಯ ನಿವೃತ್ತಿ ಘೋಷಣೆ ಬಗ್ಗೆ ಶೀಘ್ರದಲ್ಲೇ ನಿರ್ಧರಿಸುತ್ತೇನೆಂದ ಅನರ್ಹ ಶಾಸಕ ಎಸ್.ಟಿ ಸೋಮಶೇಖರ್…

ಬೆಂಗಳೂರು,ಜು,29,2019(www.justkannada.in): ಶೀಘ್ರದಲ್ಲೆ ರಾಜಕೀಯ ನೀವೃತ್ತಿ ಘೋಷಿಸುವ ಬಗ್ಗೆ ನಿರ್ಧಾರ ಕೈಗೊಳ್ಳುತ್ತೇನೆ ಎಂದು ಅನರ್ಹಗೊಂಡ ಶಾಸಕ ಎಸ್.ಟಿ ಸೋಮಶೇಖರ್ ತಿಳಿಸಿದ್ದಾರೆ.

ಬೆಂಗಳೂರಿನಲ್ಲಿ ಮಾಧ್ಯಮಗಳ ಜತೆ ಮಾತನಾಡಿದ ಅನರ್ಹ ಶಾಸಕ ಎಸ್.ಟಿ ಸೋಮಶೇಖರ್,  ಈ ರಾಜಕೀಯದಿಂದ ಚದುರಂಗದಾಟದಿಂದ ಬೇಸತ್ತಿದ್ದೇನೆ. ಇಂತಹ ರಾಜಕೀಯದಲ್ಲಿ ಕೆಲಸ ಮಾಡುವುದಕ್ಕಿಂದ ನಿವೃತ್ತಿ ಘೋಷಿಸುವುದು ಒಳ್ಳೆಯದೆಂದು ತೀರ್ಮಾನಿಸಿದ್ದೇನೆ. ಕ್ಷೇತ್ರದ ಜನರೊಂದಿಗೆ ಚರ್ಚಿಸಿ ನಿವೃತ್ತಿ ಘೋಷಿಸುತ್ತೇನೆ ಎಂದಿದ್ದಾರೆ.

 ಜೆಡಿಎಸ್ ನಾಯಕರು ಹಾಲು ಕುಡಿಯುತ್ತಿದ್ದಾರೆ. ಈ ಬಗ್ಗೆ ಗಮನಕ್ಕೆ ತಂದ್ರೂ ತಲೆ ಕೆಡಿಸಿಕೊಳ್ಳಲಿಲ್ಲ. ಕ್ಷೇತ್ರದ ಅಭಿವೃದ್ದಿಯಾಗಲಿಲ್ಲ ಹೀಗಾಗಿ ರಾಜೀನಾಮೆ ನೀಡಿದವು ಎಂದು ಎಸ್ .ಟಿ ಸೋಮಶೇಖರ್ ತಿಳಿಸಿದರು.

Key words: Ineligible legislator -ST Somashekhar -soon -decide – political retirement